ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಭಾನುವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

‘ಅಸನಿ’ ಚಂಡಮಾರುತವು ಇನ್ನಷ್ಟು ತೀವ್ರಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಈಗಲೇ ಗಂಟೆಗೆ 75 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಈ ಚಂಡಮಾರುತವು ಭೂಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಕಡಿಮೆಯಾಗಿದ್ದು, ಈ ವಾರ ಮಧ್ಯಭಾಗದಲ್ಲಿ ದುರ್ಬಲಗೊಳ್ಳಲಿದೆ ಎನ್ನಲಾಗಿದೆ.

ಆಂಧ್ರ, ಒಡಿಶಾದಲ್ಲಿ ‘ಅಸನಿ’ ಚಂಡಮಾರುತ ಭೀತಿ

ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಮತ್ತು ಪೂರ್ವ ಮಧ್ಯ ಬಂಗಾಳಕೊಲ್ಲಿಯಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.