ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Biparjoy Cyclone | ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ತೀವ್ರ: ಐಎಂಡಿ

Published 10 ಜೂನ್ 2023, 5:55 IST
Last Updated 10 ಜೂನ್ 2023, 5:55 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ಬಿಪೊರ್‌ಜಾಯ್ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಅತ್ಯಂತ ತೀವ್ರ ಬಿಪೊರ್‌ಜಾಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಗುಜರಾತ್ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಸೌರಾಷ್ಟ್ರ ಮತ್ತು ಕಚ್ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT