ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ‘ಮಾಂಡೌಸ್’ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನ ವಿವಿಧೆಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮುನ್ಸೂಚನೆ ನೀಡಿದೆ.

ಚಂಡಮಾರುತವು ಡಿಸೆಂಬರ್ 9ರಂದು ರಾತ್ರಿ ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ ಎಂದೂ ಹೇಳಿದೆ.

ಆಂಧ್ರದಲ್ಲೂ ಮುನ್ನೆಚ್ಚರಿಕೆ:

‘ಮಾಂಡೌಸ್’ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತೆ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರು ಸೂಚನೆ ನೀಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.