ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ರೀಮಲ್' ಪರಿಣಾಮ ಸಾಧ್ಯತೆ: ಇಂದು ಮಧ್ಯಾಹ್ನದಿಂದ ಕೋಲ್ಕತ್ತ ವಿಮಾನ ನಿಲ್ದಾಣ ಬಂದ್

Published 26 ಮೇ 2024, 3:32 IST
Last Updated 26 ಮೇ 2024, 3:32 IST
ಅಕ್ಷರ ಗಾತ್ರ

ಕೋಲ್ಕತ್ತ: ಬಾಂಗ್ಲಾದೇಶ ಮತ್ತು ಪಶ್ಷಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆ ಭಾರಿ ಚಂಡಮಾರುತ ಅಪ್ಪಳಿಸಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ 'ರೀಮಲ್‌' ಎಂದು ಹೆಸರಿಡಲಾಗಿದೆ.

ರೀಮಲ್‌ ಚಂಡಮಾರುತದ ಸಂಭವನೀಯ ಪರಿಣಾಮದ ದೃಷ್ಟಿಯಿಂದ ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎನ್‌ಎಸ್‌ಸಿಬಿಐ) ಭಾನುವಾರ ಮಧ್ಯಾಹ್ನದಿಂದ 21 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 26ರಂದು ಮಧ್ಯಾಹ್ನ 12 ಗಂಟೆಯಿಂದ ಮೇ 27ರ ಬೆಳಿಗ್ಗೆ 9 ಗಂಟೆವರೆಗೆ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

‌‌ಚಂಡಮಾರುತವು ಗಂಟೆಗೆ 110-120 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಹಾಗೂ 135 ಕಿ.ಮೀ ವೇಗದಲ್ಲಿ ಬಿರುಗಾಳಿಯನ್ನು ಎಬ್ಬಿಸಲಿದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಪಕ್ಕದ ಕರಾವಳಿಯಲ್ಲಿ ಭೂಕುಸಿತ ಉಂಟುಮಾಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೇ 26-27 ರಂದು ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾದ ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ. ಮೇ27ರ ವರೆಗೂ ಮೀನುಗಾರರು ಬಂಗಾಳಕೊಲ್ಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT