ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಮುಂಗಾರು ನಂತರ ರೂಪುಗೊಂಡ ಮೊದಲ ಚಂಡಮಾರುತ ‘ಶಕ್ತಿ’ಯು ಗಂಟೆಗೆ 100 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಚಂಡಮಾರುತವು ಪಶ್ಚಿಮ–ನೈಋತ್ಯದ ಕಡೆ ಸಾಗಿ ವಾಯವ್ಯ ಮತ್ತು ಪಕ್ಕದ ಮಧ್ಯ ಅರಬ್ಬೀ ಸಮುದ್ರವನ್ನು ಭಾನುವಾರ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಚಂಡಮಾರುತದ ಕಾರಣ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರದ ಕರಾವಳಿ ಮತ್ತು ಪಾಕಿಸ್ತಾನ ಕರಾವಳಿಯಲ್ಲಿ ಭಾನುವಾರದ ವರೆಗೆ ಅಲೆಗಳ ಉಬ್ಬರ ಹೆಚ್ಚಿರಲಿದೆ. ಹೀಗಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.