ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರ ತುಟ್ಟಿಭತ್ಯೆ ಶೇ 4ರಷ್ಟು ಹೆಚ್ಚಳ

Published 18 ಅಕ್ಟೋಬರ್ 2023, 14:36 IST
Last Updated 18 ಅಕ್ಟೋಬರ್ 2023, 14:36 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹಾಗೂ ಪರಿಹಾರ ಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸುವುದಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಅಲ್ಲದೇ, ರೈಲ್ವೆಯ ಪತ್ರಾಂಕಿತೇತರ ಸಿಬ್ಬಂದಿಗೆ 78 ದಿನಗಳ ವೇತನವನ್ನು ಬೋನಸ್‌ ನೀಡುವುದಕ್ಕೂ ಸಭೆ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ಈ ನಿರ್ಧಾರದಿಂದ 48.67 ಲಕ್ಷದಷ್ಟಿರುವ ಕೇಂದ್ರ ಸರ್ಕಾರಿ ನೌಕರರಿಗೆ, 67.95 ಲಕ್ಷ ಪಿಂಚಣಿದಾರರಿಗೆ ಹಾಗೂ ರೈಲ್ವೆಯ 11.07 ಲಕ್ಷಕ್ಕೂ ಅಧಿಕ ಸಿಬ್ಬಂದಿಗೆ ಪ್ರಯೋಜನವಾಗಲಿದೆ.

ತುಟ್ಟಿಭತ್ಯೆ ಹೆಚ್ಚಳವು ಜುಲೈ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಈ ಮೊದಲು ತುಟ್ಟಿಭತ್ಯೆ ಪ್ರಮಾಣವು ಶೇ 42ರಷ್ಟಿತ್ತು. ರೈಲ್ವೆ ಸಿಬ್ಬಂದಿಗೆ ಘೋಷಿಸಿರುವ ಬೋನಸ್‌ನಿಂದ ಬೊಕ್ಕಸಕ್ಕೆ ₹ 1,968.87 ಕೋಟಿಯಷ್ಟು ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT