ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಶೂಟರ್‌ಗಳ ಗುರುತು ಪತ್ತೆ ಹಚ್ಚಿದ ಸಾಕ್ಷಿದಾರ

Last Updated 19 ಮಾರ್ಚ್ 2022, 15:59 IST
ಅಕ್ಷರ ಗಾತ್ರ

ಪುಣೆ(ಪಿಟಿಐ): ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶೂಟರ್‌ಗಳಾದ ಶರದ್ ಕಲಾಸ್ಕರ್ ಹಾಗೂ ಸಚಿನ್ ಅಂದೂರೆ ಅವರನ್ನು ಪ್ರತ್ಯಕ್ಷದರ್ಶಿ ಗುರುತಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸಂಬಂಧ ಶನಿವಾರ ಮಾತನಾಡಿದ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ ಅವರು, 'ಪುಣೆ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಕಿರಣ್ ಕಾಂಬ್ಳೆ(46) ಅವರು ಶೂಟರ್‌ಗಳಾದ ಕಲಾಸ್ಕರ್ ಮತ್ತು ಅಂದೂರೆ ಅವರನ್ನು ನ್ಯಾಯಾಲಯದಲ್ಲಿ ಗುರುತಿಸಿದ್ದಾರೆ' ಎಂದು ಹೇಳಿದ್ದಾರೆ.

ವಿಚಾರಣೆ ವೇಳೆ ಪೊಲೀಸ್ ಹೇಳಿಕೆ ದಾಖಲಿಸಲು ವಿಳಂಬ ಮಾಡಿದ್ದ ಬಗ್ಗೆ ಕಾಂಬ್ಳೆ ಅವರಿಗೆ ಪ್ರಶ್ನಿಸಲಾಗಿದೆ ಎಂದು ಹೇಳಿದ್ದಾರೆ. ಮಾರ್ಚ್ 23ರಂದು ವಿಚಾರಣೆ ಮುಂದುವರಿಯಲಿದೆ. 2013ರ ಆಗಸ್ಟ್ 20ರಂದು ವಿಚಾರವಾದಿ ಹಾಗೂ ಮೂಢನಂಬಿಕೆ ವಿರೋಧಿಯಾಗಿದ್ದ ದಾಬೋಲ್ಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT