ರಾಜ್ಯದಲ್ಲಿ ಮನೋಹರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) ತನ್ನ ಕಾರ್ಯಾರಂಭ ಮಾಡಿದ ಬೆನ್ನಲ್ಲೇ ಸಿಎಂ ಹೀಗೆ ಹೇಳಿದರು.
ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ಅಲೆಕ್ಸೊ ರೆಜೆನಾಲ್ಡೊ ಲೌರೆಂಕೊ, ದಾಬೋಲಿಮ್ ವಿಮಾನ ನಿಲ್ದಾಣದ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳಲು ಜಿಎಂಆರ್ ಏರ್‌ಪೋರ್ಟ್ ಲಿಮಿಟೆಡ್‌ನ ಅಧಿಕಾರಿಗಳು ಭಾರತೀಯ ನೌಕಾಪಡೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು.
ಮನೋಹರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) ಕಾರ್ಯಾರಂಭ ಮಾಡಿದ ನಂತರ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಶಾಸಕ ತಿಳಿಸಿದರು.
ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಾವಂತ್, ಎಂಐಎ ಕಾರ್ಯಾರಂಭ ಮಾಡಿದ ನಂತರವೂ ದಾಬೋಲಿಮ್ ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ಮುಂದುವರಿಸಲಿದೆ ಎಂದು ಕೇಂದ್ರ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭವಿಷ್ಯದಲ್ಲಿಯೂ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಜಿಎಂಆರ್ ಗೋವಾ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (ಜಿಜಿಐಎಎಲ್)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇದರನ್ವಯ ಮೇ ತಿಂಗಳಿನಿಂದ ಗಳಿಸಿದ ಒಟ್ಟು ಆದಾಯದ ಶೇ. 37 ರಷ್ಟು ಗೋವಾ ಪಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ 2023ರ ಜನವರಿಯಲ್ಲಿ 5,095 ಇದ್ದ ದೇಶೀಯ ವಿಮಾನಗಳ ಕಾರ್ಯಾಚರಣೆಯ ಸಂಖ್ಯೆ ಡಿಸೆಂಬರ್ ವೇಳೆಗೆ 3,510ಕ್ಕೆ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ವಿಮಾನಗಳ ಸಂಖ್ಯೆಯಲ್ಲಿ ಶೇ. 31 ರಷ್ಟು ಇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೋ ತಿಳಿಸಿದರು.