ನವದೆಹಲಿ: ಕೋವಿಡ್–19ನಿಂದಾಗಿ ದೇಶದಲ್ಲಿ ಬುಧವಾರ 2,023 ಜನರು ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಕಾಣಿಸಿಕೊಂಡಾಗಿನಿಂದ ಈ ವರೆಗೆ ಒಂದು ದಿನದಲ್ಲಿ ಮೃತಪಟ್ಟವರ ಸಂಖ್ಯೆ ಮೊದಲ ಬಾರಿಗೆ 2,000 ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‘ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 2,023. ಮಹಾರಾಷ್ಟ್ರದಲ್ಲಿ ಗರಿಷ್ಠ 519 ಮಂದಿ ಮೃತಪಟ್ಟಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

‘ನಂತರದ ಸ್ಥಾನದಲ್ಲಿ ದೆಹಲಿ (277 ಮಂದಿ ಸಾವು), ಛತ್ತೀಸಗಡ (191), ಉತ್ತರ ಪ್ರದೇಶ (162), ಕರ್ನಾಟಕ (149) ಹಾಗೂ ಗುಜರಾತ್ (121) ರಾಜ್ಯಗಳಿವೆ. ಈ ವರೆಗೆ ಈ ಪಿಡುಗಿನಿಂದ ಸಾವನ್ನಪ್ಪಿದವರ ಸಂಖ್ಯೆ 1,82,553’ ಎಂದೂ ತಿಳಿಸಿದೆ.

‘ಸದ್ಯ ದೇಶದಲ್ಲಿ 21,57,000 ಸಕ್ರಿಯ ಪ್ರಕರಣಗಳಿವೆ. ಕಳೆದ ವರ್ಷ ದೇಶದಲ್ಲಿ ವರದಿಯಾಗಿದ್ದ ಕೋವಿಡ್–19ನ ಸಕ್ರಿಯ ಪ್ರಕರಣಗಳಿಗಿಂತ ಎರಡು ಪಟ್ಟು ಹೆಚ್ಚು ಪ್ರಕರಣಗಳ ಸಂಖ್ಯೆ ಇದು’ ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕಳೆದ ವರ್ಷಕ್ಕೆ ಹೋಲಿಸಿದರೆ, ಎರಡನೇ ಅಲೆಯ ಈ ಸಂದರ್ಭದಲ್ಲಿ ಮೃತಪಟ್ಟಿರುವವರಲ್ಲಿ 70 ವರ್ಷ ಹಾಗೂ ಅದಕ್ಕೆ ಮೇಲ್ಪಟ್ಟ ವಯೋಮಾನದವರೇ ಹೆಚ್ಚು’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.