ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಬುಧವಾರ ಭಾರತ ಬಂದ್‌ಗೆ ಕರೆ ನೀಡಿವೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಸಿಡಿಎಒಆರ್) ಸರ್ಕಾರದ ಮುಂದಿಟ್ಟಿದೆ.
ಭಾರತ ಬಂದ್ ಅಂಗವಾಗಿ ವಿವಿಧೆಡೆ ಆಯೋಜಿಸುವ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದಲಿತರು, ಆದಿವಾಸಿಗಳು ಮತ್ತು ಒಬಿಸಿ ಸಮುದಾಯದವರಿಗೆ ಒಕ್ಕೂಟವು ಮನವಿ ಮಾಡಿದೆ.