ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಧ್ಯ ಪ್ರದೇಶ: ದಲಿತ ದಂಪತಿ ಮೇಲೆ ಹಲ್ಲೆ ಮಾಡಿ, ಶೂ ಹಾರ ಹಾಕಿಸಿದ ದುಷ್ಕರ್ಮಿಗಳು

Published 19 ಮೇ 2024, 8:01 IST
Last Updated 19 ಮೇ 2024, 8:01 IST
ಅಕ್ಷರ ಗಾತ್ರ

ಅಶೋಕ ನಗರ(ಮಧ್ಯ ಪ್ರದೇಶ): ದುಷ್ಕರ್ಮಿಗಳ ಗುಂಪೊಂದು ದಲಿತ ವೃದ್ಧ ದಂಪತಿ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯ ಪ್ರದೇಶದ ಅಶೋಕ ನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಗೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಈ ಸಂಬಂಧ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ದಂಪತಿಯ ಮಗ ಆರೋಪಿಗಳಲ್ಲಿ ಒಬ್ಬನ ಹೆಂಡತಿಯನ್ನು ಚುಡಾಯಿಸಿದ್ದಾನೆ ಎಂದು ಹಲ್ಲೆಕೋರರು ಆರೋಪಿಸಿದ್ದಾರೆ. ಘಟನೆ ಬಳಿಕ ದಲಿತ ಕುಟುಂಬ ಊರು ತೊರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಸುಮಾರು 65 ವರ್ಷದ ದಲಿತ ವ್ಯಕ್ತಿ ಮತ್ತು ಆತನ 60 ವರ್ಷದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ, ಅವರ ಕೈಯಿಂದಲೇ ಶೂಗಳ ಹಾರ ಹಾಕಿಸಿದ್ದಾರೆ.

ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಶನಿವಾರ ಪೊಲೀಸರು 10 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 147 (ಗಲಭೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಎಲ್ಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT