ಕೃತ್ಯದ ವಿಡಿಯೊ ಚಿತ್ರೀಕರಿಸಲಾಗಿದ್ದು, ಆರೋಪಿ ಮತ್ತು ಆತನ ಸಹಚರ ವಿಡಿಯೊ ಬಳಸಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಇಬ್ಬರು ಯುವಕರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸೆಪ್ಟೆಂಬರ್ 4ರಂದು ಕಾಲೇಜಿಗೆ ಹೋಗಿದ್ದಾಗ ನೆರೆಹೊರೆಯವರಾದ ಆದಿತ್ಯ ಸಿಂಗ್ ಮತ್ತು ಸಮೀರ್ ಎಂಬುವವರು ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಹೋಟೆಲ್ ಒಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆದಿತ್ಯ ಸಿಂಗ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ಸಮೀರ್ ಕೃತ್ಯವನ್ನು ಚಿತ್ರೀಕರಿಸಿದ್ದಾನೆ. ಆ ವಿಡಿಯೊ ಬಳಸಿ ಇಬ್ಬರೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಘಟನೆಯ ಕುರಿತು ಕಳೆದ ಶುಕ್ರವಾರ ಸಂತ್ರಸ್ತೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ. ಬಳಿಕ ಶನಿವಾರ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.