ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

14 ವರ್ಷಗಳ ಹಿಂದಿನ ಜಗಳದ ದ್ವೇಷ; ಗುಂಡಿಕ್ಕಿ ದಲಿತ ಯುವಕನ ಹತ್ಯೆ

Published 27 ಜೂನ್ 2024, 16:22 IST
Last Updated 27 ಜೂನ್ 2024, 16:22 IST
ಅಕ್ಷರ ಗಾತ್ರ

ಫರೀದಾಬಾದ್‌: ಹರಿಯಾಣದ ಫರೀದಾಬಾದ್‌ ಜಿಲ್ಲೆಯ ಫತೇಪುರ್‌ ಬಿಲ್ಲೋಚ್‌ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದ  ಘರ್ಷಣೆಯಲ್ಲಿ 25 ವರ್ಷದ ದಲಿತ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಈ ಗಲಾಟೆಯಲ್ಲಿ ಇತರ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. 

ದೇವೇಂದ್ರ ಎಂಬ ಮೃತ ಯುವಕ 2010ರಲ್ಲಿ ಕೆಲವರ ಜೊತೆ ಗಲಾಟೆ ಮಾಡಿಕೊಂಡಿದ್ದನು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ದೇವೇಂದ್ರ ಮಾರುಕಟ್ಟೆ ಕಡೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ನಿಂತಿದ್ದ ಯುವಕರು ಆತನಿಗೆ ಜಾತಿ ನಿಂದನೆ ಮಾಡಿದ್ದಾರೆ. ದೇವೇಂದ್ರ ಇದರ ವಿರುದ್ಧ ಪ್ರತಿಭಟಿಸುತ್ತಿದ್ದಂತೆ ಅವನ ಆಮೇಲೆ ಹಲ್ಲೆ ನಡೆಸಲಾಗಿದೆ. ಆಗ ಆರೋಪಿಗಳು ದೇವೇಂದ್ರನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಗ್ರಾಮದ ನಿವಾಸಿ ಸುಂದರ್‌ ಲಾಲ್‌ ದೂರು ನೀಡಿದ್ದಾರೆ. 

ಬಳಿಕ ಆರೋಪಿಗಳು ಮತ್ತೆ ಆರು ಜನರ ಮೇಲೆ ದಾಳಿ ನಡೆಸಿದ್ದು, ಎಲ್ಲರ ಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT