ಸೂರತ್: ನಗರದಲ್ಲಿನ ಗಣೇಶ ಪೆಂಡಾಲ್‌ವೊಂದಕ್ಕೆ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಮೂರ್ತಿಗೆ ಹಾನಿಯಾಗಿದೆ.
ಸೈಯದ್‌ಪುರ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಕೆಲವು ಬಾಲಕರನ್ನು ಪೊಲೀಸರು ಬಂಧಿಸಿದ ನಂತರ, ಸುಮಾರು 300 ಜನರ ಗುಂಪು ತಮ್ಮ ಸಮುದಾಯದ ಸದಸ್ಯರ ವಿರುದ್ಧದ ಕ್ರಮವನ್ನು ಪ್ರತಿಭಟಿಸಲು ಲಾಲ್‌ಗೇಟ್ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿತು.
ಈ ಸಂದರ್ಭ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಗಾಯಗೊಂಡಿದ್ದಾರೆ. ವಾಹನಕ್ಕೆ ಹಾನಿಯಾಗಿದೆ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹಲೋತ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿ, ಅಶ್ರುವಾಯು ಪ್ರಯೋಗಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 34 ಜನರನ್ನು ಬಂಧಿಸಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.