ಲಖನೌ: ಉತ್ತರ ಪ್ರದೇಶದ ಸಹಾರನಪುರ ಜಿಲ್ಲೆಯ ದೇವಬಂದ್ನಲ್ಲಿರುವ ಇಸ್ಲಾಂ ಶಿಕ್ಷಣದ ಪ್ರತಿಷ್ಠಿತ ಸಂಸ್ಥೆ ದಾರುಲ್ ಉಲೂಮ್ಗೆ ಭೇಟಿ ನೀಡಿದ ಅಫ್ಗಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರಿಗೆ ಶನಿವಾರ ಭವ್ಯ ಸ್ವಾಗತ ಕೋರಲಾಯಿತು.

ಆದರೆ, ಮುತ್ತಾಕಿ ಅವರ ಭೇಟಿ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತೆಯರಿಗೆ ಸಂಸ್ಥೆಯನ್ನು ಪ್ರವೇಶಿಸಲು ಅವಕಾಶ ನೀಡಲಿಲ್ಲ.

ಸಂಸ್ಥೆಯ ವಿದ್ಯಾರ್ಥಿಗಳು ಮುತ್ತಾಕಿ ಅವರನ್ನು ನೋಡಲು ಮುಗಿಬಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಈ ಕುರಿತ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ದೆಹಲಿಯಲ್ಲಿರುವ ಅಫ್ಗಾನಿಸ್ತಾನ ರಾಯಭಾರ ಕಚೇರಿಯಲ್ಲಿ ಶುಕ್ರವಾರ ಮುತ್ತಾಕಿ ಅವರು ನಡೆಸಿದ್ದ ಸುದ್ದಿಗೋಷ್ಠಿಗೂ ಪತ್ರಕರ್ತೆಯರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಇದು ವಿವಾದವಾಗಿದ್ದು, ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

‘ಮುತ್ತಾಕಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ, ಗ್ರಂಥಾಲಯದ ಪರದೆ ಹಾಕಿ, ಅದರ ಹಿಂದೆ ಪತ್ರಕರ್ತೆಯರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತೆಯರಿಗೆ ಕುಳಿತುಕೊಳ್ಳಲು ಈ ರೀತಿ ವ್ಯವಸ್ಥೆ ಮಾಡುವುದು ಇಲ್ಲಿನ ಸಂಪ್ರದಾಯ. ಇದರಲ್ಲಿ ಹೊಸದೇನೂ ಇಲ್ಲ’ ಎಂದು ದಾರುಲ್ ಉಲೂಮ್ ಈ ಮೊದಲು ಹೇಳಿತ್ತು.

‘ಆದರೆ, ಮುತ್ತಾಕಿ ಅವರ ತಮ್ಮ ಭೇಟಿಯನ್ನು ಮೊಟಕುಗೊಳಿಸಿ, ರಸ್ತೆ ಮಾರ್ಗವಾಗಿ ದೆಹಲಿಗೆ ಹೊರಡಲು ನಿರ್ಧರಿಸಿದ್ದರಿಂದ ಅವರ ಉಪನ್ಯಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಯಿತು’ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಮುತ್ತಾಕಿ ಅವರು 20 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತಮಗೆ ನೀಡಲಾದ ಅದ್ದೂರಿ ಸ್ವಾಗತದಿಂದ ಅವರು ಬೆರಗಾದರು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.