ನವದೆಹಲಿ: ದೇಶದ ಎಲ್ಲ ರಾಜ್ಯಗಳಲ್ಲೂ ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆಗೆ ವೇಗವಾಗಿ ಹರಡುತ್ತಿರುವ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಕಾರಣ ಎಂದು ಇತ್ತೀಚಿನ ಡೇಟಾವನ್ನು ಉಲ್ಲೇಖಿಸಿ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ, ದೇಶದ ಪಶ್ಚಿಮ ಭಾಗದಲ್ಲಿ ಮಾತ್ರ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಓಮೈಕ್ರಾನ್ ಕಾರಣವಾಗಿತ್ತು. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಡೆಲ್ಟಾ ರೂಪಾಂತರವು ಪ್ರಧಾನವಾಗಿತ್ತು.

ಆದರೆ, ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದ ಪೂರ್ವ ಭಾಗದ ಎಲ್ಲ ರಾಜ್ಯಗಳಲ್ಲೂ ಹೆಚ್ಚಿನ ಸಂಖ್ಯೆಯ ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮೂಲವೊಂದು ತಿಳಿಸಿದೆ.

‘ಆದ್ದರಿಂದ ಎಲ್ಲಾ ರಾಜ್ಯಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆಯು ವೇಗವಾಗಿ ಹರಡುವ ಓಮೈಕ್ರಾನ್ ರೂಪಾಂತರದಿಂದ ಆಗುತ್ತಿದೆ ಎಂದು ಹೇಳಬಹುದು’ಎಂದು ಮೂಲಗಳು ತಿಳಿಸಿವೆ.

ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಒಂದೇ ದಿನದಲ್ಲಿ 1,41,986 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,53,68,372ಕ್ಕೆ ಏರಿದೆ.

ಈ ಮಧ್ಯೆ, ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮಾರ್ಗಸೂಚಿಗಳ ಪಾಲನೆ ಮತ್ತು ಗುಂಪು ಸೇರುವುದನ್ನು ತಪ್ಪಿಸುವಂತೆ ಜನರನ್ನು ಒತ್ತಾಯಿಸಿದೆ.

ಕೋವಿಡ್ -19 ಕಾರಣದಿಂದಾಗಿ ಆಸ್ಪತ್ರೆಯ ದಾಖಲಾತಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಯಾವುದೇ ಕೊರತೆಯನ್ನು ತಪ್ಪಿಸಲು ಆಸ್ಪತ್ರೆಗಳ ಸೌಲಭ್ಯಗಳು ಸೇರಿದಂತೆ ಮೂಲ ಸೌಕರ್ಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.