ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ವೈಯಕ್ತಿಕ ಮಾಹಿತಿ ಕಳವು ಆರೋಪ: 11 ಸಂಸ್ಥೆಗಳಿಗೆ ನೋಟಿಸ್‌

Last Updated 2 ಏಪ್ರಿಲ್ 2023, 19:30 IST
ಅಕ್ಷರ ಗಾತ್ರ

ಹೈದರಾಬಾದ್: ದೇಶದಾದ್ಯಂತ 67 ಕೋಟಿಯಷ್ಟು ಜನರ ವೈಯಕ್ತಿಕ ಮಾಹಿತಿ ಕಳವು ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 11 ಸಂಸ್ಥೆಗಳಿಗೆ ಸೈಬರಾಬಾದ್‌ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಸಂಸ್ಥೆಗಳ ಪ್ರತಿನಿಧಿಗಳು ಒಂದು ವಾರದೊಳಗೆ ಪೊಲೀಸರ ಮುಂದೆ ಹಾಜರಾಗಬೇಕು. ತಮ್ಮ ಕಂಪನಿಗಳಲ್ಲಿ ದತ್ತಾಂಶವನ್ನು ನಿರ್ವಹಿಸುವುದಕ್ಕೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಬೇಕು’ ಎಂಬುದಾಗಿ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳು, ಒಂದು ಖಾಸಗಿ ಬ್ಯಾಂಕ್, ಸಾಮಾಜಿಕ ಮಾಧ್ಯಮ ಸಂಸ್ಥೆ, ಐಟಿ ಕಂಪನಿ, ಆನ್‌ಲೈನ್‌ ದಿನಸಿ ಮಾರಾಟ ಕಂಪನಿ, ಡಿಜಿಟಲ್‌ ಪೇಮೆಂಟ್‌ ಆ್ಯಪ್‌ ಕಂಪನಿ ಹಾಗೂ ಒಂದು ಆನ್‌ಲೈನ್ ಮೂಲಕ ವಿಮಾ ಪಾಲಿಸಿ ಒದಗಿಸುವ ಕಂಪನಿ ಸೇರಿ 11 ಸಂಸ್ಥೆಗಳಿಗೆ ನೋಟಿಸ್‌ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT