ಥಾಣೆ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ತಾರಿಕ್ ಪರ್ವೀನ್ ಎಂಬಾತನನ್ನು ಸುಲಿಗೆ ಪ್ರಕರಣದಲ್ಲಿ ಥಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಕೂಡ ಆರೋಪಿಯಾಗಿದ್ದಾರೆ.

ತಾರಿಕ್ ಅಬ್ದುಲ್ ಕರೀಮ್ ಮರ್ಚಂಟಾ ಅಲಿಯಾಸ್ ತಾರಿಕ್ ಪರ್ವೀನ್ (55), ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಬೇರೊಂದು ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಲ್ಡರ್ ಕೇತನ್ ತನ್ನಾ ನೀಡಿರುವ ದೂರಿನ ಮೇರೆಗೆ ಸದ್ಯ ದಾಖಲಾಗಿರುವ ಎಫ್ಐಆರ್ನಲ್ಲಿ ಮುಂಬೈ ಮತ್ತು ಥಾಣೆಯ ಪೊಲೀಸ್ ಆಯುಕ್ತರಾಗಿದ್ದ ಸಿಂಗ್ ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರ ಹೆಸರುಗಳಿವೆ. ಸಿಂಗ್ ಥಾಣೆ ಪೊಲೀಸ್ ಕಮೀಷನರ್ ಆಗಿದ್ದಾಗ, ಬಿಲ್ಡರ್ ಕೇತನ್ ತನ್ನಾನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುವ ಮೂಲಕ ಸಿಂಗ್ ಮತ್ತು ಇತರ ಅಧಿಕಾರಿಗಳು ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೊಂದು ಸುಲಿಗೆ ಪ್ರಕರಣದ ಆರೋಪಿ ಪರ್ವೀನ್ ನನ್ನು ತಲೋಜಾ ಜೈಲಿನಲ್ಲಿ ಇರಿಸಲಾಗಿದೆ. ಆತನನ್ನು ಥಾಣೆ ಪೊಲೀಸರಿಗೆ ಒಪ್ಪಿಸುವಂತೆ ಮುಂಬೈನ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಥಾಣೆ ಪೊಲೀಸರು ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ಸೆಪ್ಟೆಂಬರ್ 22 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ಸಿಂಗ್ ಅವರನ್ನು ಇದುವರೆಗೂ ಬಂಧಿಸಲಾಗಿಲ್ಲ. ಮಾರ್ಚ್ನಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕಗಳು ತುಂಬಿದ ವಾಹನ ಪತ್ತೆ ಪ್ರಕರಣದಲ್ಲಿ ಪರಮ್ ಬಿರ್ ಸಿಂಗ್ ಅವರನ್ನು ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆ ಮಾಡಲಾಗಿತ್ತು. ನಂತರ ಅವರು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರು, ಇದು ಸಚಿವರ ರಾಜೀನಾಮೆಗೆ ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.