ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯದಲ್ಲಿ ತಂದೆಯಿಂದ ಲೈಂಗಿಕ ದೌರ್ಜನ್ಯ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

Last Updated 11 ಮಾರ್ಚ್ 2023, 14:07 IST
ಅಕ್ಷರ ಗಾತ್ರ

ನವದೆಹಲಿ: ಬಾಲ್ಯದಲ್ಲಿ ತಂದೆಯಿಂದಲೇ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಮಹಿಳಾ ಆಯೋಗ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಪ್ರಶಸ್ತಿ ಪುರಸ್ಕೃತ ಮಹಿಳೆಯರ ಹೋರಾಟದ ಕಥೆಗಳು ತಮ್ಮನ್ನು ಭಾವುಕಳನ್ನಾಗಿಸಿದವು. ತಮ್ಮ ತಂದೆಯಿಂದ ಲೈಂಗಿಕ ದೌರ್ಜನ್ಯ ಮತ್ತು ನಂತರದ ಹೋರಾಟವನ್ನು ನೆನಪಿಸಿದವು ಎಂದು ಅವರು ಹೇಳಿದ್ದಾರೆ.

‘ನನ್ನ ತಂದೆ ನನ್ನನ್ನು ತುಂಬಾ ಹೊಡೆಯುತ್ತಿದ್ದರು, ಅವರು ಮನೆಗೆ ಬಂದಾಗ ನಾನು ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ, ಅವರನ್ನು ಕಂಡರೆ ತುಂಬಾ ಹೆದರುತ್ತಿದ್ದೆ, ಆ ಸಮಯದಲ್ಲಿ, ಅಂತಹ ದೌರ್ಜನ್ಯಗಳ ವಿರುದ್ಧ ಮಹಿಳೆಯರನ್ನು ಹೇಗೆ ಸಬಲಗೊಳಿಸಬೇಕು ಎಂದು ನಾನು ಇಡೀ ರಾತ್ರಿ ಯೋಚಿಸುತ್ತಿದ್ದೆ. ನನ್ನ ಕೂದಲನ್ನು ಹಿಡಿದುಕೊಂಡು ನನ್ನ ತಲೆಯನ್ನು ಗೋಡೆಗೆ ಬಲವಾಗಿ ಹೊಡೆಯುತ್ತಿದ್ದರು. ಆದರೆ, ಇದು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನನ್ನಲ್ಲಿನ ದೃಢತೆಯನ್ನು ಹೆಚ್ಚಿಸಿತು ಎಂದು ನಾನು ನಂಬುತ್ತೇನೆ’ಎಂದು ಹೇಳಿದರು.

ನಾಲ್ಕನೇ ತರಗತಿಯವರೆಗೆ ಮಾತ್ರ ತಮ್ಮ ತಂದೆಯೊಂದಿಗೆ ಇದ್ದೆ ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ.

2015ರಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸ್ವಾತಿ ಮಲಿವಾಲ್ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾದರು. ನಂತರ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಯಿತು. ಇದಕ್ಕೂ ಮೊದಲು ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಗಾರರಾಗಿ ಕೆಲಸ ಮಾಡಿದ್ದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಮಾಲಿವಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ದನಿ ಎತ್ತುತ್ತಾರೆ. ಜನವರಿ ತಿಂಗಳು ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚಳದ ನಂತರ, ಮಲಿವಾಲ್ ಅವರು ರಾತ್ರಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದರು. ಈ ಸಂದರ್ಭ ಕುಡಿದ ಅಮಲಿನಲ್ಲಿದ್ದ ಕ್ಯಾಬ್ ಡ್ರೈವರ್, ಅವರ ಕೈಯನ್ನು ಕಾರಿನ ಕಿಟಕಿಗೆ ಲಾಕ್ ಮಾಡಿ ಎಳೆದೊಯ್ದಿದ್ದನು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT