ಮುಂಬೈ: ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ ಸೂಟ್‌ಕೇಸ್‌ನಲ್ಲಿ ಶವವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂದಿಸಿದ್ದಾರೆ.
ಲಗೇಜ್ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಹತ್ಯೆ ಪ್ರಕರಣದ ತನಿಖೆಯನ್ನು ಪೈಧೋನಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬೇರೆ ನಗರಕ್ಕೆ ಪ್ರಯಾಣಿಸಲು ಆರೋಪಿಗಳು ಪೈಧೋನಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ರೈಲ್ವೆ ಪೊಲೀಸರು ಅವರ ಶೂಟ್‌ಕೇಸ್ ತಪಾಸಣೆ ಮಾಡಿದಾಗ ಅದರಲ್ಲಿ ಮೃತದೇಹ ಇರುವುದು ಪತ್ತೆಯಾಯಿತು.
ಬಂಧಿತ ಆರೋಪಿಗಳನ್ನು ಪ್ರವೀಣ್ ಚಾವ್ಡಾ ಮತ್ತು ಶಿವಜೀತ್ ಸುರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.