ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಎಇಎಸ್ ಬಾಧಿಸಿ ಸಾವಿಗೀಡಾದವರ ಸಂಖ್ಯೆ 83ಕ್ಕೆ ಏರಿಕೆ

Last Updated 16 ಜೂನ್ 2019, 10:59 IST
ಅಕ್ಷರ ಗಾತ್ರ

ಮುಜಾಫರ್‌ನಗರ್: ಬಿಹಾರದ ಮುಜಾಫರ್‌ನಗರದಲ್ಲಿ ಅಕ್ಯೂಟ್ ಎನ್ಸೆಫಾಲಿಟೆಸ್ ಸಿಂಡ್ರೊಮ್ (ಎಇಎಸ್) ಬಾಧಿಸಿ ಸಾವಿಗೀಡಾದವರ ಸಂಖ್ಯೆ 83ಕ್ಕೇರಿದೆ.ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ₹4 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.

ಎಇಎಸ್ ಬಾಧಿಸಿ ಮಕ್ಕಳು ಮೃತರಾಗಿರುವ ಸಂಗತಿ ಬಗ್ಗೆ ಸಂತಾಪ ವ್ಯಕ್ತ ಪಡಿಸಿದ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ 4 ಲಕ್ಷ ಧನ ಸಹಾಯ ಘೋಷಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಇಎಸ್ ಹರಡದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಿತೀಶ್ ಕುಮಾರ್, ಆರೋಗ್ಯ ಇಲಾಖೆ, ಜಿಲ್ಲಾ ಅಧಿಕಾರಿಗಳು ಮತ್ತು ವೈದ್ಯರಿಗೆ ಆದೇಶಿಸಿದ್ದಾರೆ.

ಭಾನುವಾರ ಬೆಳಗ್ಗೆ ಮುಜಾಫರ್‌ನಗರ್ಜಿಲ್ಲಾಡಳಿತ ಪ್ರಕಟಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಕೇಜ್ರಿವಾಲ್ ಆಸ್ಪತ್ರೆ ಮತ್ತುಶ್ರೀ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ 83 ಮಕ್ಕಳು ಸಾವಿಗೀಡಾಗಿದ್ದಾರೆ.ಶ್ರೀ ಕೃಷ್ಣ ಮೆಡಿಕಲ್ ಕಾಲೇಜಿನಲ್ಲಿ 69 ಮಂದಿ ಮೃತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT