ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಠಾಕ್ರೆ

uddhav
Last Updated 26 ಡಿಸೆಂಬರ್ 2022, 8:35 IST
ಅಕ್ಷರ ಗಾತ್ರ

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.

‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ.

ಉದ್ಧವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಏಕನಾಥ್ ಶಿಂದೆ, ಸುಪ್ರೀಂ ಕೋರ್ಟ್‌ನಲ್ಲಾಗಲಿ ಅಥವಾ ಕೇಂದ್ರದ ಬಳಿಯಾಗಲಿ, ಪ್ರತಿ ಇಂಚು ಭೂಮಿಗಾಗಿ ಹೋರಾಡುತ್ತೇವೆ. ಗಡಿಯಲ್ಲಿ ವಾಸಿಸುವವರ ಮೇಲಿನ ಅನ್ಯಾಯದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT