ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳಿ: ಯುವಪೀಳಿಗೆಗೆ ಅಮಿತ್ ಶಾ ಕರೆ

Published 13 ಆಗಸ್ಟ್ 2023, 16:24 IST
Last Updated 13 ಆಗಸ್ಟ್ 2023, 16:24 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು 25 ವರ್ಷಗಳ ಕಾಲ ‘ಆಜಾದಿ ಕಾ ಅಮೃತ್ ಕಾಲ್‌’ಗಾಗಿ ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳುವಂತೆ ದೇಶದ ಯುವಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮನವಿ ಮಾಡಿದ್ದಾರೆ.

 77ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ನಗರದಲ್ಲಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಆಯೋಜಿಸಿದ್ದ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಯುವ ಪೀಳಿಗೆಗೆ ಈ ‘ಅಮೃತ ಕಾಲ’ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಹಿಂದಿನ ಯುವ ಪೀಳಿಗೆಯು ದೇಶದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿ ವಸಾಹತುಶಾಹಿಯ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಿದಂತೆ, ಇಂದಿನ ಯುವ ಪೀಳಿಗೆ 2047ರವರೆಗೆ 25 ವರ್ಷಗಳ ಕಾಲ ಭಾರತ ಮಾತೆಗೆ ತಮ್ಮನ್ನು ಅರ್ಪಿಸಿಕೊಳ್ಳಬೇಕಾಗಿದೆ’ ಅವರು ಹೇಳಿದರು. 

‘ನಾವು ಸ್ವತಂತ್ರರಾಗಿರುವುದರಿಂದ ಇನ್ನು ಮುಂದೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಅಗತ್ಯವಿಲ್ಲ. ಆದರೆ, ನಮ್ಮ ದೇಶಕ್ಕಾಗಿ ಬದುಕುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’ ಎಂದು ಶಾ ಹೇಳಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT