ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರಾಹುಲ್‌ ವಿರುದ್ಧದ ಮಾನಹಾನಿ ಪ್ರಕರಣ– ವಿಚಾರಣೆ ಮುಂದೂಡಿಕೆ

Published 20 ಜನವರಿ 2024, 12:57 IST
Last Updated 20 ಜನವರಿ 2024, 12:57 IST
ಅಕ್ಷರ ಗಾತ್ರ

ಠಾಣೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ, ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಭಿವಂಡಿಯ ನ್ಯಾಯಾಲಯವು ಮಾರ್ಚ್ 16ಕ್ಕೆ ಮುಂದೂಡಿ ಶನಿವಾರ ಆದೇಶಿಸಿದೆ.

‘ಭಾರತ್ ಜೋಡೊ ನ್ಯಾಯ ಯಾತ್ರೆ’ಯಲ್ಲಿ ಭಾಗಿಯಾಗಿರುವುದರಿಂದ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್‌ ಗಾಂಧಿ ಕೋರಿದ್ದರು. 

‘ಈ ಅರ್ಜಿ ಸ್ವೀಕರಿಸಿದ ಮ್ಯಾಜಿಸ್ಟ್ರೇಟ್‌ ಎಲ್‌.ಸಿ. ವಾಡಿಕರ್ ವಿಚಾರಣೆಯನ್ನು ಮುಂದೂಡಿದರು’ ಎಂದು ರಾಹುಲ್‌ ಗಾಂಧಿ ಪರ ವಕೀಲ ನಾರಾಯಣ ಅಯ್ಯರ್‌ ತಿಳಿಸಿದ್ದಾರೆ.

‘ಭಿವಾಂಡಿಯಲ್ಲಿ 2014ರ ಮಾರ್ಚ್‌ 6ರಂದು ನಡೆದಿದ್ದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಆರ್‌ಎಸ್‌ಎಸ್‌ನವರು ಮಹಾತ್ಮ ಗಾಂಧಿಯನ್ನು ಕೊಂದವರು’ ಎಂದಿದ್ದರು. ರಾಹುಲ್‌ ಅವರ ಈ ಹೇಳಿಕೆ ಆರ್‌ಎಸ್‌ಎಸ್‌ ಗೌರವಕ್ಕೆ ಧಕ್ಕೆ ತಂದಿದೆ ಎಂದು ದೂರಿ, ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜೇಶ್‌ ಕುಂಟೆ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT