ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣವು ಬಾಕಿ ಇರುವಾಗಲೇ ತಮ್ಮ ವಿರುದ್ಧದ ಮೊಕದ್ದಮೆಯನ್ನು ಪ್ರಶ್ನಿಸಿ ಆತಿಶಿ, ಕೇಜ್ರಿವಾಲ್ ಸೇರಿ ನಾಲ್ವರೂ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೆ.2ರಂದು ತೀರ್ಪು ನೀಡಿದ್ದ ಹೈಕೋರ್ಟ್ ‘ಬಿಜೆಪಿಯನ್ನು ನಿಂದಿಸುವ ಹಾಗೂ ಅನಗತ್ಯ ರಾಜಕೀಯ ಲಾಭ ಗಳಿಸುವ ಉದ್ದೇಶದ ಆರೋಪಗಳು ಮಾನಹಾನಿಕರವಾಗಿವೆ’ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.