ನವದೆಹಲಿ: ದೇಶದ173 ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್‌ಸಿಸಿಯನ್ನು ವಿಸ್ತರಿಸುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರುಶನಿವಾರ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದ್ದರು.

‘ದೇಶದ ಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎನ್‌ಸಿಸಿಯನ್ನು ವಿಸ್ತರಿಸಲಾಗುವುದು. ಇದರಿಂದಾಗಿ ಈ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆಗಾಗಿ ಮಾನವ ಶಕ್ತಿ ವೃದ್ಧಿಸಬಹುದು. ಅಲ್ಲದೆ ಸೇನೆಯಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸಲು ಕೌಶಲ ತರಬೇತಿ ದೊರೆದಂತಾಗುತ್ತದೆ’ ಎಂದು ಅವರು ತಿಳಿಸಿದ್ದರು.

‘ಈಗಾಗಲೇ ಎನ್‌ಸಿಸಿಗಾಗಿಗಡಿ ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಲ್ಲಿ1,000 ಕ್ಕೂ ಹೆಚ್ಚು ಶಾಲೆಗಳನ್ನೂ ಆರಿಸಲಾಗಿದೆ. ಇಲ್ಲಿಂದ 1 ಲಕ್ಷಕ್ಕೂ ಹೆಚ್ಚು ಕೆಡೆಟ್‌ಗಳನ್ನು ನೇಮಕಾತಿ ಮಾಡಲಾಗುವುದು, ಅವರಲ್ಲಿ ಮೂರನೇ ಒಂದು ಭಾಗದಷ್ಟು ಯುವತಿಯರು ಇರಲಿದ್ದಾರೆ. ಒಟ್ಟು 83 ಎನ್‌ಸಿಸಿ ಘಟಕಗಳನ್ನು ಮೇಲ್ದರ್ಜೆಗೇರಿಸಲಾಗುವುದು’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.