ನವದೆಹಲಿ(ಪಿಟಿಐ): ‘ಸಹಭಾಗಿತ್ವ ಮಾದರಿ’ಯಲ್ಲಿ 23 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸ್ವಯಂ ಸೇವಾ ಸಂಸ್ಥೆಗಳು (ಎನ್ಜಿಒ), ಖಾಸಗಿ ಶಾಲೆಗಳು ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅದರ ಭಾಗವಾಗಿ ಈಗ 23 ಸೈನಿಕ ಶಾಲೆಗಳ ಸ್ಥಾಪನೆಗೆ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ಸೈನಿಕ ಶಾಲೆಗಳ ಸಂಘದ ವತಿಯಿಂದ ಸಹಭಾಗಿತ್ವ ಮಾದರಿಯಲ್ಲಿ ಕಾರ್ಯನಿರ್ವಹಿಸುವ ಹೊಸ ಸೈನಿಕ ಶಾಲೆಗಳ ಸಂಖ್ಯೆ 42ಕ್ಕೆ ಏರಿದಂತಾಗಲಿದೆ. ಹಳೆ ಮಾದರಿಯಂತೆ, ಸದ್ಯ 33 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.