ನವದೆಹಲಿ: ‘ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವದೇಶಿ ನಿರ್ಮಿತ ಹಗುರ ಯುದ್ಧ ವಿಮಾನ ತೇಜಸ್ನಲ್ಲಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಗುರುವಾರ ಹಾರಾಟ ನಡೆಸಲಿದ್ದಾರೆ’ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಉತ್ಪನ್ನಗಳ ಪ್ರದರ್ಶನದಲ್ಲಿಯೂ ಅವರು ಪಾಲ್ಗೊಳ್ಳಲಿದ್ದಾರೆ.

‘ವಾಯುಪಡೆ ಈಗಾಗಲೇ ತೇಜಸ್ ವಿಮಾನಗಳನ್ನು ಸೇವೆಗೆ ನಿಯೋಜಿಸಿದೆ. ಈ ವಿಮಾನಗಳನ್ನುನೌಕಾಪಡೆಗೂ ಬಳಸುವ ಸಲುವಾಗಿ ವಿನ್ಯಾಸ ಕಾರ್ಯ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ರಾಜನಾಥ್ ಅವರು ಎರಡು ಸೀಟುಗಳ ಈ ತೇಜಸ್ ವಿಮಾನದಲ್ಲಿ ಹಾರಾಟ ನಡೆಸುವ ಮೊದಲ ರಕ್ಷಣಾ ಸಚಿವರಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.