ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ರಕ್ಷಣಾ ಸಚಿವ ರಾಜನಾಥ ಸಿಂಗ್

Published 16 ಜನವರಿ 2024, 5:30 IST
Last Updated 16 ಜನವರಿ 2024, 5:30 IST
ಅಕ್ಷರ ಗಾತ್ರ

ಅಯೋಧ್ಯೆ/ಲಖನೌ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮಂಗಳವಾರ) ಲಖನೌದ ಹನುಮಾನ್ ಸೇತು ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪ್ರಮುಖ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕರೆ ನೀಡಿದ್ದರು.

ಲಖನೌದ ಸಂಸದರಾಗಿರುವ ಸಿಂಗ್ ಅವರು ಹನುಮಾನ್ ಸೇತು ದೇವಾಲಯಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಬಳಿಕ ದೇವರಿಗೆ ಪೂಜೆ ಸಲ್ಲಿಸಿದರು.

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗುತ್ತಿರುವುದು ದೇಶದ ಜನರಿಗೆ ಸಂತಸದ ವಿಚಾರವಾಗಿದೆ. ಈ ಸಮಾರಂಭದಲ್ಲಿ ದೇಶದ ಜನರು ಮಾತ್ರವಲ್ಲದೆ ವಿದೇಶಿಗರು ಕೂಡ ಭಾಗವಹಿಸಲಿದ್ದಾರೆ ಎಂದು ಸಿಂಗ್ ಹೇಳಿದರು.

ಬಿಜೆಪಿ ನಾಯಕರು, ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ದೇಶದ ವಿವಿಧ ಭಾಗಗಳಲ್ಲಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ರಾಮಮಂದಿರ ಉದ್ಘಾಟನೆಯ ದಿನ ಸಮೀಪಿಸುತ್ತಿರುವಾಗ ದೇಶದಾದ್ಯಂತ ಸಂಭ್ರಮದ ವಾತಾವರಣ ಮೂಡಿಸಲು ಬಿಜೆಪಿ ಈ ಅಭಿಯಾನ ಕೈಗೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT