ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುದ್ಧವಿಮಾನ ವಾಹಕ ನೌಕೆ ಅಭಿವೃದ್ಧಿ: ತಾತ್ವಿಕ ಒಪ್ಪಿಗೆ

ರಕ್ಷಣಾ ಖರೀದಿ ಮಂಡಳಿಗೆ ನೌಕಾಪಡೆ ಪ್ರಸ್ತಾವ
Published 28 ನವೆಂಬರ್ 2023, 15:40 IST
Last Updated 28 ನವೆಂಬರ್ 2023, 15:40 IST
ಅಕ್ಷರ ಗಾತ್ರ

ನವದೆಹಲಿ: ಯುದ್ಧವಿಮಾನ ವಾಹಕ ಎರಡನೇ ನೌಕೆಯನ್ನು ಅಭಿವೃದ್ಧಿಪಡಿಸುವ ಕುರಿತ ನೌಕಾಪಡೆಯ ಪ್ರಸ್ತಾವಕ್ಕೆ ರಕ್ಷಣಾ ಖರೀದಿ ಮಂಡಳಿಯು (ಡಿಪಿಬಿ) ತಾತ್ವಿಕ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ದೇಶೀಯವಾಗಿಯೇ ಯುದ್ಧವಿಮಾನ ವಾಹಕ ನೌಕೆಯನ್ನು ಅಭಿವೃದ್ಧಿಪಡಿಸುವ ರಕ್ಷಣಾ ಸಚಿವಾಲಯದ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ₹40 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಈ  ನೌಕೆಯನ್ನು ‘ಐಎಸಿ–2’ ಎಂದು ಕರೆಯಲಾಗುವುದು.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆ ಗುರುವಾರ ನಡೆಯಲಿದ್ದು, ‘ಐಎಸಿ–2’ ಕುರಿತ ಪ್ರಸ್ತಾವವನ್ನು ಪರಿಶೀಲನೆ ನಡೆಸಲಿದೆ ಎಂದು ಮೂಲಗಳು ಹೇಳಿವೆ.

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ತನ್ನ ಮಿಲಿಟರಿ ಪ್ರಾಬಲ್ಯವನ್ನು ಹೆಚ್ಚಳ ಮಾಡುತ್ತಿರುವುದಕ್ಕೆ ಜಾಗತಿಕವಾಗಿ ಆತಂಕ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ‘ಐಎಸಿ–2’ ಅಭಿವೃದ್ದಿಪಡಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಹತ್ವ ಬಂದಿದೆ.

ಹೆಚ್ಚುವರಿ ‘ತೇಜಸ್‌’ ಖರೀದಿ:

ಹೆಚ್ಚುವರಿಯಾಗಿ 97 ‘ತೇಜಸ್ ಮಾರ್ಕ್–1ಎ‘ ಯುದ್ಧವಿಮಾನಗಳ ಖರೀದಿಗಾಗಿ ವಾಯುಪಡೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಸಹ ಡಿಎಸಿ ಪರಿಗಣಿಸುವ ಸಾಧ್ಯತೆ ಇದೆ.

ಒಟ್ಟು ₹ 1.15 ಲಕ್ಷ ಕೋಟಿ ವೆಚ್ಚದಲ್ಲಿ ಈ ಯುದ್ಧವಿಮಾನಗಳನ್ನು ಖರೀದಿಸಲು ವಾಯುಪಡೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT