ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ ಮೇಯರ್ ಆಯ್ಕೆ ಜ.6ರಂದು ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಶೆಲ್ಲಿ ಒಬೆರಾಯ್ ಮೇಯರ್ ಮತ್ತು ಮಹಮ್ಮದ್ ಇಕ್ಬಾಲ್ ಉಪಮೇಯರ್ ಸ್ಥಾನಕ್ಕೆ ಎಎಪಿ ಅಭ್ಯರ್ಥಿಗಳಾಗಿದ್ದಾರೆ.

ಶೆಲ್ಲಿ, ಪೂರ್ವ ಪಟೇಲ್ ನಗರ ವಾರ್ಡ್‌ನಿಂದ ಮೊದಲ ಸಲ ಆಯ್ಕೆಯಾಗಿದ್ದಾರೆ. ಇಕ್ಬಾಲ್, ಚಾಂದಿನಿ ಮಹಲ್ ವಾರ್ಡ್‌ನಿಂದ ಎರಡನೆ ಸಲ ವಿಜೇತರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಗುಪ್ತಾ ಅಭ್ಯರ್ಥಿಗಳ ಹೆಸರು ಘೋಷಿಸಿದ್ದಾರೆ.

ಒಬೆರಾಯ್ ಅತಿಥಿ ಉಪನ್ಯಾಸಕಿ. ಇಕ್ಬಾಲ್, ಎಎಪಿ ಶಾಸಕ ಶೋಯಬ್ ಇಕ್ಬಾಲ್ ಅವರ ಪುತ್ರ. ದೆಹಲಿ ಮೇಯರ್ ಹುದ್ದೆ 5 ವರ್ಷ ಅವಧಿಗೆ ಮಹಿಳೆಗೆ ಮೀಸಲಾಗಿದೆ. ಜ.6ರಂದು ಆಯ್ಕೆಯಾದ 250 ಸದಸ್ಯರು ಪ್ರಮಾಣವಚನ ಸ್ವೀಕರಿಸಿ ಮೇಯರ್ ಆಯ್ಕೆ ಮಾಡಲಿದ್ದಾರೆ. ಅಂದು ಆಯ್ಕೆಯಾದವರು 2023ರ ಏಪ್ರಿಲ್‌ವರೆಗೆ ಮೇಯರ್ ಸ್ಥಾನದಲ್ಲಿರಲಿದ್ದು, ಏಪ್ರಿಲ್‌ನಲ್ಲಿ ಮತ್ತೆ ಮೇಯರ್ ಆಯ್ಕೆ ನಡೆಯಲಿದೆ ಎಂದು ಗುಪ್ತಾ ಹೇಳಿದ್ದಾರೆ.

ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ 134 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿ ಕೆಲ ನಾಯಕರು ವ್ಯಕ್ತಪಡಿಸಿದ್ದರು. ಹೀಗಾಗಿ ಮೇಯರ್ ಆಯ್ಕೆ ಕುತೂಹಲ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.