ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಢ ಮೇಯರ್ ಚುನಾವಣೆ ಮೋಸ ಆರೋಪ: BJP ಕಚೇರಿ ಮುಂದೆ ಪ್ರತಿಭಟಿಸಲಿರುವ AAP

Published 31 ಜನವರಿ 2024, 13:47 IST
Last Updated 31 ಜನವರಿ 2024, 13:47 IST
ಅಕ್ಷರ ಗಾತ್ರ

ನವದೆಹಲಿ: ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಆರೋಪಿಸಿರುವ ಎಎಪಿ, ಫೆಬ್ರುವರಿ 2ರಂದು ಇಲ್ಲಿನ ಬಿಜೆ‍ಪಿ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಎಎಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೂ, ಬಿಜೆಪಿ ಗೆಲುವು ಸಾಧಿಸಿತ್ತು. ಚುನಾವಣಾಧಿಕಾರಿ ಮತ ಪತ್ರಗಳನ್ನು ತಿರುಚಿದ್ದಾರೆ ಎಂದು ಉಭಯ ಪಕ್ಷಗಳು ಆರೋಪಿಸಿ, ಗದ್ದಲ ಎಬ್ಬಿಸಿದ್ದವು. ಬಳಿಕ ನಡೆದ ಹಿರಿಯ ಉಪ ಮೇಯರ್ ಹಾಗೂ ಉಪ ಮೇಯರ್‌ ಚುನಾವಣೆಯನ್ನು ಬಹಿಷ್ಕರಿಸಿದ್ದವು.

ಬಿಜೆಪಿಯ ಮನೋಜ್ ಸೋಂಕರ್ ಅವರು ಎಎಪಿಯ ಕುಲದೀಪ್ ಕುಮಾರ್ ಅವರನ್ನು 16–12 ಮತಗಳ ಅಂತರದಿಂದ ಸೋಲಿಸಿ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಒಟ್ಟು ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT