ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಉತ್ತಮ ಹವಾಮಾನ ಪರಿಸ್ಥಿತಿಯಿಂದಾಗಿ ಗಾಳಿಯ ಗುಣಮಟ್ಟ ತುಸು ಸುಧಾರಿಸಿದೆ. ಆದಾಗ್ಯೂ, ಗಾಳಿ ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 'ಕಳಪೆ' ಮಟ್ಟದಲ್ಲೇ ಇದೆ ಎಂದು ವರದಿಯಾಗಿದೆ.

ಇಂದು (ಬುಧವಾರ) ಬೆಳಿಗ್ಗೆ 8ರ ಹೊತ್ತಿಗೆ ದೆಹಲಿ ಎಕ್ಯೂಐ 168ರಷ್ಟು ದಾಖಲಾಗಿದೆ. ಮಂಗಳವಾರ ರಾತ್ರಿ 291 ರಷ್ಟಿತ್ತು ಎಂಬುದು ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಅಂಕಿ–ಅಂಶಗಳಿಂದ ತಿಳಿದುಬಂದಿದೆ.

ದೆಹಲಿಯಲ್ಲಿರುವ 39 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 27ರಲ್ಲಿ ಎಕ್ಯೂಐ ಪ್ರಮಾಣವು ಕಳಪೆಯಾಗಿದೆ. ಇನ್ನುಳಿದ ಕೇಂದ್ರಗಳಲ್ಲಿ ಎಕ್ಯೂಐ ಪ್ರಮಾಣವು ತುಸು ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ ‘ಉತ್ತಮ‘ ಎಂದು, 51ರಿಂದ 100ರಷ್ಟಿದ್ದರೆ ‘ಸಮಾಧಾನಕರ’, 101 ರಿಂದ 200ರಷ್ಟಿದ್ದರೆ ‘ಸಾಧಾರಣ’, 201 ರಿಂದ 300ರಷ್ಟಿದ್ದರೆ ‘ಕಳಪೆ’ ಹಾಗೂ 301ರಿಂದ 400ರಷ್ಟಿದ್ದರೆ ‘ಅತ್ಯಂತ ಕಳಪೆ’ ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ ‘ತೀವ್ರ ಕಳಪೆ’ ಹಾಗೂ 450ಕ್ಕಿಂತ ಹೆಚ್ಚಾದರೆ ‘ತೀವ್ರಕ್ಕಿಂತಲೂ ಅಪಾಯಕಾರಿ’ ಎಂದು ಪರಿಗಣಿಸಲಾಗುತ್ತದೆ.

ದೆಹಲಿಯ ಕನಿಷ್ಠ ತಾಪಮಾನವು ಇಂದು 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಈ ಋತುವಿನ ಸರಾಸರಿಗಿಂತ 3.1 ಡಿಗ್ರಿಯಷ್ಟು ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.