ನವದೆಹಲಿ: ರಾಜಸ್ಥಾನದ ಅಲವಾರ ನಗರದಲ್ಲಿ ತನಗೆ ಪರಿಚಯವಿರುವ ವ್ಯಕ್ತಿಯ ಪತ್ನಿ ಮೇಲೆ ರಾತ್ರಿ ಅತ್ಯಾಚಾರ ಎಸಗಿದ 19 ವರ್ಷದ ಯುವಕ, ಮರುದಿನ ಬೆಳಿಗ್ಗೆ ದೆಹಲಿಗೆ ತೆರಳಿ, ತಾನು ಹಿಂದೆ ಕೆಲಸ ಮಾಡಿದ್ದ ಮನೆಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ.

ದಕ್ಷಿಣ ದೆಹಲಿಯ ಪ್ರತಿಷ್ಠಿತ ಕೈಲಾಶ್ ಹಿಲ್ಸ್ನಲ್ಲಿ ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯ 22 ವರ್ಷದ ಪುತ್ರಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಾಥಮಿಕ ತನಿಖೆ ಬಳಿಕ ಈ ಭೀಕರ ಕೊಲೆಯ ವಿವರಗಳು ಗೊತ್ತಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

‘ರಾಹುಲ್ ಮೀನಾ ಎಂಬಾತ ಬುಧವಾರ ಮುಂಜಾನೆ ಈ ಕೊಲೆ ಮಾಡಿದ್ದಾನೆ. ಈತ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಅವರಲ್ಲಿ ಒಬ್ಬರನ್ನು ಅತ್ಯಂತ ಕ್ರೂರವಾಗಿ ಕೊಂದಿದ್ದಾನೆ. ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಗುರುವಾರ ಹಾಜರು ಪಡಿಸಲಾಯಿತು. ಆದರೆ, ಆತನಲ್ಲಿ ಪಶ್ಚಾತ್ತಾಪದ ಯಾವ ಲಕ್ಷಣವೂ ಕಂಡುಬರಲಿಲ್ಲ. ತನ್ನ ಹೇಳಿಕೆಯನ್ನು ಪದೇ ಪದೇ ಬದಲಿಸುತ್ತಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿ ಪೊಲೀಸರು ಆತನನ್ನು ನಾಲ್ಕು ದಿನಗಳವರೆಗೆ ಕಸ್ಟಡಿಗೆ ನೀಡುವಂತೆ ಸಲ್ಲಿಸಿದ ಮನವಿಯನ್ನು ಮ್ಯಾಜಿಸ್ಟ್ರೇಟ್ ಪುರಸ್ಕರಿಸಿದ್ದಾರೆ.

ಮೀನಾ ಐಆರ್ಎಸ್ ಅಧಿಕಾರಿಯ ಮನೆಯಲ್ಲಿ ಎಂಟು ತಿಂಗಳು ಕೆಲಸ ಮಾಡಿದ್ದ. ಹಣಕಾಸಿನ ಅವ್ಯವಹಾರದ ಕಾರಣಕ್ಕಾಗಿ ಒಂದು ತಿಂಗಳ ಹಿಂದಷ್ಟೇ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.

‘ಆರೋಪಿಯು ಸಂತ್ರಸ್ತೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾನೆ.ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ನಿಂದ ಉಸಿರುಗಟ್ಟಿಸಿ ಕೊಂದಿದ್ದಾನೆ. ನಂತರ ಶವವನ್ನು ಲಾಕರ್ ಇದ್ದ ಮತ್ತೊಂದು ಕೋಣೆಗೆ ಎಳೆದುಕೊಂಡು ಹೋಗಿ, ಆಕೆಯ ಬೆರಳಚ್ಚು ಬಳಸಿ ಬಯೋಮೆಟ್ರಿಕ್ ಲಾಕ್ ತೆರೆಯಲು ಪ್ರಯತ್ನಿಸಿದ್ದಾನೆ. ಆದರೆ ಅದು ತೆರೆದಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ನಂತರ ಲಾಕರ್ ಮುರಿದು, ನಗದು ಮತ್ತು ಚಿನ್ನಾಭರಣಗಳನ್ನು ತೆಗೆದುಕೊಂಡು ಸಂತ್ರಸ್ತೆಯ ಪೋಷಕರು ಮನೆಗೆ ಬರುವ ಸುಮಾರು 30 ನಿಮಿಷಗಳ ಮೊದಲು ಸ್ಥಳದಿಂದ ಪರಾರಿಯಾಗಿದ್ದಾನೆ. ಆತ ಸುಮಾರು 30 ನಿಮಿಷಗಳ ಕಾಲ ಮನೆ ಒಳಗಿದ್ದ’ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-384354233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.