70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. 2015ರಲ್ಲಿ ಮೂರು, 2020ರಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಸಲ 48 ಸ್ಥಾನಗಳನ್ನು ಜಯಿಸಿ ಭಾರಿ ಬಹುಮತ ಸಾಧಿಸಿದೆ. ಕಳೆದೆರಡು ಚುನಾವಣೆಗಳಲ್ಲಿ ಕ್ರಮವಾಗಿ 67 ಹಾಗೂ 62 ಸ್ಥಾನಗಳಲ್ಲಿ ವಿಜಯದ ಕೇಕೆ ಹಾಕಿದ್ದ ಎಎಪಿ, 22 ಸ್ಥಾನಗಳನ್ನಷ್ಟೇ ಗೆದ್ದು ಅಧಿಕಾರ ಕಳೆದುಕೊಂಡಿದೆ.

ಕಾಂಗ್ರೆಸ್ ಪಕ್ಷ ಸತತ ಮೂರನೇ ಬಾರಿಗೆ 'ಶೂನ್ಯ' ಸಾಧನೆ ಮಾಡಿದೆ. ಚುನಾವಣಾ ಫಲಿತಾಂಶದ ಹೈಲೈಟ್ಸ್ ಇಲ್ಲಿದೆ...

* ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಹಾಗೂ ಎಎಪಿ ನಡುವೆ ಪ್ರಬಲ ಪೈಪೋಟಿ ನಡೆದಿದೆ. ಎಎಪಿ 12, ಬಿಜೆಪಿ 14 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

* ನವದೆಹಲಿ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಹಿನ್ನಡೆ ಅನುಭವಿಸಿದ್ದಾರೆ.
.Delhi Election Results Live | ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.Delhi Elections 2025 Voting Live: ಸಂಜೆ 5 ಗಂಟೆ ಹೊತ್ತಿಗೆ ಶೇ 57.70ರಷ್ಟು ಮತದಾನ .
* ದೆಹಲಿಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು ಸರಳ ಬಹುಮತದ ಗಡಿ ದಾಟಿದೆ. ಬಿಜೆಪಿ 45, ಎಎಪಿ 24 ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

* ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಓಟ ಮುಂದುವರೆಸಿದೆ. 12 ಕ್ಷೇತ್ರಗಳ ಪೈಕಿ ಬಿಜೆಪಿ 7 ರಲ್ಲಿ, ಎಎಪಿ 4, ಕಾಂಗ್ರೆಸ್ 1ರಲ್ಲಿ ಮುನ್ನಡೆ ಸಾಧಿಸಿವೆ.

* ಚುನಾವಣೆ ಆಯೋಗದ ಮಾಹಿತಿ ಪ್ರಕಾರೆ ಬಿಜೆಪಿ 43, ಎಎಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

* ದೆಹಲಿಯ ಪೂರ್ವಾಂಚಲ ಪ್ರದೇಶದಲ್ಲಿರುವ 27 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ.

* ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮೂರನೇ ಭಾರಿಯೂ ಶೂನ್ಯ ಸಂಪಾದನೆ ಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
.Delhi Election Results: ಆರಂಭದಲ್ಲಿ ಕೇಜ್ರಿವಾಲ್, ಅತಿಶಿ, ಸಿಸೋಡಿಯ ಹಿನ್ನಡೆ.Delhi Election Results Live | ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.
* ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಜಯೇಂದ್ರ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿತು.

* ದೆಹಲಿಯ ಕಸ್ತೂರ್ ಭಾ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ನೀರಜ್ಗೆ ಗೆಲುವು. ಮೊದಲ ಗೆಲುವು ದಾಖಲಿಸಿದ ಬಿಜೆಪಿ

* ದೆಹಲಿಯಲ್ಲಿ ಬಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹೇಳಿದ್ದಾರೆ.

* ದೆಹಲಿಯಲ್ಲಿ ತುಕ್ಡೆ ತುಕ್ಡೆ ಗ್ಯಾಂಗಿಗೆ ಸೋಲುಂಟಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ

* ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಎದುರು ಸುಮಾರು 3200 ಮತಗಳಿಂದ ಸೋಲು ಕಂಡಿದ್ದಾರೆ.

* ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಿಜೆಪಿ ಅಭ್ಯರ್ಥಿ ತನ್ವೀರ್ ಸಿಂಗ್ ಎದುರು 600 ಮತಗಳಿಂದ ಪರಾಭವಗೊಂಡಿದ್ದಾರೆ.

* ದೆಹಲಿ ಮುಖ್ಯಮಂತ್ರಿ ಅತಿಶಿ ಗೆಲುವು ದಾಖಲಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಹಿನ್ನಡೆಯಲ್ಲಿದ್ದ ಅವರು ಅಂತಿಮ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಜಯದ ನಗೆ ಬೀರಿದರು.

* 'ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ' ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

* ಚುನಾವಣೆಯಲ್ಲಿ ಎಎಪಿಗೆ ಹಿನ್ನಡೆಯಾಗಿರುವುದನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಆತಿಶಿ, ಬಿಜೆಪಿಯ ಸರ್ವಾಧಿಕಾರ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

* ಚುನಾವಣೆಯಲ್ಲಿ ಸಾರ್ವಜನಿಕರನ್ನು ದಾರಿತಪ್ಪಿಸಲು ಸಾಧ್ಯವಿಲ್ಲ ಎಂಬುದನ್ನು ದೆಹಲಿಗರು ತೋರಿಸಿಕೊಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

* ಜನ ಶಕ್ತಿಯೇ ಸರ್ವಶ್ರೇಷ್ಠ. ಅಭಿವೃದ್ಧಿ ಗೆಲುವು ಸಾಧಿಸುತ್ತದೆ. ಈ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿ ಜನತೆಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕೆ ದೆಹಲಿ ಪ್ರಮುಖ ಪಾತ್ರವಹಿಸಲಿದೆ. ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಈ ನಿಟ್ಟಿನಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದೂ ಹೇಳಿದ್ದಾರೆ.

ಎಲ್ಲ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 48 ಸ್ಥಾನಗಳನ್ನು ಗೆದ್ದಿದ್ದು, ಎಎಪಿ 22 ಕಟೆ ಜಯ ಸಾಧಿಸಿದೆ. ಕಾಂಗ್ರೆಸ್ ಸತತ ಮೂರನೇ ಬಾರಿಯೂ ಯಾವುದೇ ಸ್ಥಾನ ಗೆದ್ದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.