ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಜನರು ಹಕ್ಕು ಚಲಾಯಿಸುತ್ತಿದ್ದಾರೆ. ದೆಹಲಿಯಲ್ಲಿ 1.56 ಕೋಟಿ ಮತದಾರರಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೂರನೇ ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲು ಎದುರು ನೋಡುತ್ತಿದೆ. ಇನ್ನೊಂದೆಡೆ ಬಿಜೆಪಿ, ಕಾಂಗ್ರೆಸ್ ಕೂಡ ಅಧಿಕಾರಕ್ಕೆ ಬರುವ ಭರವಸೆಯಲ್ಲಿದೆ.
.Delhi Elections 2025 Voting Highlights: ರಾಹುಲ್, ಮುರ್ಮು, ಅತಿಶಿ ಮತದಾನ.
70 ವಿಧಾನಸಭಾ ಕ್ಷೇತ್ರದ 13,766 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಶಾಂತಿಯುತ ಮತದಾನ ಮತ್ತು ಭದ್ರತೆಗಾಗಿ 200 ಅರೆಸೇನೆ ಪಡೆ, 35,626 ದೆಹಲಿ ಪೊಲೀಸ್ ಸಿಬ್ಬಂದಿ, 19 ಸಾವಿರ ಹೋಮ್ಗಾರ್ಡ್ಗಳನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.

ಸುಮಾರು 3 ಸಾವಿರ ಮತಗಟ್ಟೆಗಳನ್ನು ಸೂಕ್ಷ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಆ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಮತಎಣಿಕೆ ಫೆ.8ರಂದು ನಡೆಯಲಿದೆ.
.Delhi Elections 2025| ಇಂದು ಮತದಾನ: ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ಧತೆ.Delhi Elections 2025 Voting Live: ಸಂಜೆ 5 ಗಂಟೆ ಹೊತ್ತಿಗೆ ಶೇ 57.70ರಷ್ಟು ಮತದಾನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.