ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 26 ವರ್ಷಗಳ ಬಳಿಕ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ.

ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧನಕರ್ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ (ಗುರುವಾರ) ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಗೆಲುವು ಸಾಧಿಸಿದ ಮಾಜಿ ಸಂಸದ ಪರ್ವೇಶ್ ವರ್ಮಾ ಅವರು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, 14 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಮುಖ್ಯಮಂತ್ರಿಗಳಿದ್ದು, ಯಾರೊಬ್ಬರೂ ಮಹಿಳೆಯರಿಲ್ಲ. ಹೀಗಾಗಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ಮುಖ್ಯಮಂತ್ರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.