ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೈಲಿನಿಂದ ಬಿಡುಗಡೆಯಾದ ಕೇಜ್ರಿವಾಲ್‌ಗೆ ಅಭೂತಪೂರ್ವ ಸ್ವಾಗತ: ಮೊಳಗಿದ ಜಯಘೋಷ

Published : 13 ಸೆಪ್ಟೆಂಬರ್ 2024, 13:36 IST
Last Updated : 13 ಸೆಪ್ಟೆಂಬರ್ 2024, 13:36 IST
ಫಾಲೋ ಮಾಡಿ
Comments

ಬೆಂಗಳೂರು: ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಪಡೆದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದರು.

ದೆಹಲಿಯ ತಿಹಾರ್‌ ಜೈಲಿನ ಹೊರಗೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಅವರನ್ನು ಸ್ವಾಗತಿಸಿದರು. ಘೋಷಣೆ ಮೊಳಗಿಸಿ ಹರ್ಷ ವ್ಯಕ್ತ ಪಡಿಸಿದರು. ಕೇಜ್ರಿವಾಲ್ ಪರ ಜಯಘೋಷಗಳು ಮೊಳಗಿದವು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸುರಿವ ಮಳೆಯನ್ನು ಲೆಕ್ಕಿಸದೇ ಸೇರಿದ್ದ ನೂರಾರು ಜನ ಕೇಜ್ರಿವಾಲ್ ಜಿಂದಾಬಾದ್‌ ಎಂದು ಘೋಷಣೆ ಕೂಗಿದರು. ಕೈಯಲ್ಲಿ ಕೇಜ್ರಿವಾಲ್ ಹಾಗೂ ಬಾಬಾ ಸಾಹೆಬ್ ಅಂಬೇಡ್ಕರ್‌ ಅವರ ಭಾವ ಚಿತ್ರ ಹಿಡಿದುಕೊಂಡು ಹರ್ಷ ವ್ಯಕ್ತ ಪಡಿಸಿದರು.

ಬಳಿಕ ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನನ್ನ ಜೀವ ದೇಶಕ್ಕಾಗಿ ಸಮರ್ಪಿತವಾಗಿದೆ. ನನ್ನ ಜೀವನದ ಪ್ರತಿಯೊಂದು ಕ್ಷಣ, ನನ್ನ ರಕ್ತದ ಪ್ರತಿ ಹನಿಯೂ ದೇಶಕ್ಕಾಗಿ ಸಮರ್ಪಿತ. ನನ್ನ ಜೀವನದಲ್ಲಿ ಹಲವಾರು ಕಷ್ಟಗಳನ್ನು ಎದುರಿಸಿದ್ದೇನೆ. ನಾನು ಸತ್ಯ ಹಾಗೂ ಪ್ರಾಮಾಣಿಕತೆಯಿಂದ ಇದ್ದಿದ್ದರಿಂದ ದೇವರು ಪ್ರತಿ ಹೆಜ್ಜೆಯಲ್ಲಿ ನನಗೆ ಬೆಂಬಲಿಸಿದ್ದಾನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT