ನವದೆಹಲಿ: ‘ಕೋಚಿಂಗ್ ಸೆಂಟರ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಹಲವು ತಂಡಗಳನ್ನು ರಚಿಸಲಾಗಿದೆ’ ಎಂದು ಡಿಸಿಪಿ (ಕೇಂದ್ರ ದೆಹಲಿ) ಎಂ.ಹರ್ಷವರ್ಧನ ತಿಳಿಸಿದರು.

‘ಕಟ್ಟಡ ಮತ್ತು ನೆಲಮಹಡಿಗೆ ಸಂಬಂಧಿಸಿ ವರದಿ ನೀಡುವಂತೆ ಅಗ್ನಿಶಾಮಕ ದಳಕ್ಕೆ ಸೂಚಿಸಲಾಗಿದೆ. ತಳಮಹಡಿಯು ನೆಲಮಟ್ಟದಿಂದ ಎಂಟು ಅಡಿಗಳಷ್ಟು ಕೆಳಕ್ಕೆ ಇದ್ದು, ನೀರು ನುಗ್ಗುವ ವೇಳೆ ಅಲ್ಲಿ 18 ವಿದ್ಯಾರ್ಥಿಗಳಿದ್ದರು’ ಎಂದು ಹೇಳಿದರು.

‘ಘಟನೆಗೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್ನ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸ್ಟೋರ್ ರೂಂ ಬದಲು ಗ್ರಂಥಾಲಯ: ಕೋಚಿಂಗ್ ಸೆಂಟರ್ನ ನೆಲಮಹಡಿಯನ್ನು ಸ್ಟೋರ್ ರೂಂ (ಉಗ್ರಾಣ) ಆಗಿ ಬಳಸಲು ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಅದನ್ನು ಗ್ರಂಥಾಲಯವಾಗಿ ಬಳಸಿ, ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೆಲಮಹಡಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್ಲ ಕೋಚಿಂಗ್ ಸೆಂಟರ್ಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ತನಿಖೆಗೆ ಸಹಕಾರ: ‘ಸಮರ್ಪಣೆ ಮತ್ತು ಬದ್ಧತೆಯಿಂದ ದೇಶ ಸೇವೆಗೆ ತಯಾರಿ ನಡೆಸುತ್ತಿದ್ದ ಮೂವರ ಸಾವಿನಿಂದ ತೀವ್ರ ದುಃಖವಾಗಿದೆ. ಘಟನೆಯ ಕುರಿತ ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ’ ಎಂದು ತರಬೇತಿ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.