ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳತನ ಶಂಕೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ವಿವಸ್ತ್ರಗೊಳಿಸಿದ ವಾರ್ಡನ್

Published 4 ಮೇ 2023, 5:51 IST
Last Updated 4 ಮೇ 2023, 5:51 IST
ಅಕ್ಷರ ಗಾತ್ರ

ನವದೆಹಲಿ: ಕಳ್ಳತನದ ಶಂಕೆಯಿಂದ ಇಲ್ಲಿನ ನರ್ಸಿಂಗ್ ಕಾಲೇಜೊಂದರ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವಾರ್ಡನ್ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯ ಅಹಲ್ಯಾಬಾಯಿ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಕಾಲೇಜು ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಹಾಗೂ ವಾರ್ಡನ್‌ ಸೇರಿ ಮಂಡಿ ಹೌಸ್ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ಸಂದರ್ಭ ವಾರ್ಡನ್ ಅವರ ಬ್ಯಾಗ್‌ನಿಂದ ₹ 8,000 ಕಳೆದು ಹೋಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಬಿಎಸ್‌ಸಿ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅನುಮಾನ ಬಂದಿದೆ. ಇತರ ವಿದ್ಯಾರ್ಥಿನಿಯರ ಸಹಾಯದಿಂದ ಆ ಇಬ್ಬರೂ ಶಂಕಿತ ವಿದ್ಯಾರ್ಥಿನಿಯರ ದಿರಿಸನ್ನು ವಾರ್ಡನ್ ಅವರು ಬಿಚ್ಚಿಸಿದ್ದಾರೆ. ಆದರೆ ಅವರ ಬಳಿ ಕಾಣೆಯಾದ ಹಣ ಪತ್ತೆಯಾಗಿಲ್ಲ ಎಂದು ಪೊಲೀಸರು ವಿವರಿಸಿದರು.

ಘಟನೆ ಬಳಿಕ ವಿದ್ಯಾರ್ಥಿನಿಯರ ಪೋಷಕರು ಹಾಸ್ಟೆಲ್‌ಗೆ ಆಗಮಿಸಿ, ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಈ ಪ್ರಕರಣವು ಐಪಿ ಎಸ್ಟೇಟ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT