ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್ ಅವರ ಎಸ್‌ಯುವಿ ಕಾರು ಕಳ್ಳತನ

Last Updated 22 ಏಪ್ರಿಲ್ 2022, 7:40 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್ ಅವರ ಎಸ್‌ಯುವಿ ಕಾರನ್ನು ಜಂಗ್‌ಪುರ ಎಕ್ಸ್‌ಟೆನ್ಶನ್ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪದಿಂದ ಶುಕ್ರವಾರ ಮುಂಜಾನೆ ಕಳವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದತ್, 'ಇಂದು ಬೆಳಗ್ಗೆ ತಮ್ಮ ಬಿಳಿ ಬಣ್ಣದ ಹರಿಯಾಣ ನಂಬರ್ ಪ್ಲೇಟ್ ಹೊಂದಿರುವ ಟೊಯೊಟಾ ಫಾರ್ಚುನರ್ ಕಾರು ಕಳ್ಳತನವಾಗಿದೆ' ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳನ್ನು ಪತ್ತೆಹಚ್ಚಲು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಘಟನೆಯ ಬಗ್ಗೆ ಆಟೋ ಕಳ್ಳತನ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT