ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನನಷ್ಟ ಮೊಕದ್ದಮೆ: ದೆಹಲಿ ಸಚಿವೆ ಅತಿಶಿಗೆ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ

Published 28 ಮೇ 2024, 9:56 IST
Last Updated 28 ಮೇ 2024, 9:56 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ, ಸಚಿವೆ ಅತಿಶಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

ಜೂನ್ 29 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಸಮನ್ಸ್‌ನಲ್ಲಿ ಉಲ್ಲೇಖಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಈಚೆಗೆ ಪ್ರವೀಣ್ ಶಂಕರ್ ಕಪೂರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಚಿವೆ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನನ್ನು ಮೇ 10ರಂದು ಮಂಜೂರು ಮಾಡಿತ್ತು. ಅವರು ಸುಪ್ರೀಂ ಕೋರ್ಟ್‌ನ ಸೂಚನೆಯ ಪ್ರಕಾರ ಜೂನ್ 2ರಂದು ಜೈಲಿಗೆ ವಾಪಸ್ ಆಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT