ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ಟ್ ನ್ಯೂಸ್‌ನ ಜುಬೈರ್‌ಗೆ ಜಾಮೀನು ನಿರಾಕರಣೆ: 14 ದಿನ ನ್ಯಾಯಾಂಗ ಬಂಧನ

Last Updated 2 ಜುಲೈ 2022, 10:01 IST
ಅಕ್ಷರ ಗಾತ್ರ

ದೆಹಲಿ: ಟ್ವೀಟ್‌ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ 'ಆಲ್ಟ್‌ ನ್ಯೂಸ್'ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಮೊಹಮ್ಮದ್‌ ಜುಬೈರ್‌ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜುಬೈರ್ ಅವರನ್ನು ಜೂನ್‌ 27ರಂದು ಬಂಧಿಸಲಾಗಿತ್ತು. ಅವರ ವಿರುದ್ಧ ಐಪಿಸಿ ಸೆಕ್ಷನ್‌ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಲೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯ) ಅಡಿಯಲ್ಲಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT