ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮನ್ಸ್‌ ಪ್ರಶ್ನಿಸಿ ಕೇಜ್ರಿವಾಲ್‌ ಮೇಲ್ಮನವಿ: ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

Published 14 ಮಾರ್ಚ್ 2024, 15:53 IST
Last Updated 14 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ನೀಡಿರುವ ಸಮನ್ಸ್‌ ಅನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಕುರಿತು ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

ಮಾರ್ಚ್‌ 16ರಂದು ವಿಚಾರಣೆಗೆ ಹಾಜರಾಗುವಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಫೆಬ್ರುವರಿ 17ರಂದು ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಅದನ್ನು ಅವರು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ ನಡೆದ ವಿಚಾರಣೆ ವೇಳೆ ಕೇಜ್ರಿವಾಲ್‌ ಪರ ಹಾಜರಾದ ವಕೀಲ ರಮೇಶ್‌ ಗುಪ್ತಾ ಅವರು, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶಕ್ಕೆ ತಡೆ ಅಥವಾ ಕೇಜ್ರಿವಾಲ್‌ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದರು.

ಇ.ಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಗಳು ಕೊನೆ ಕ್ಷಣದಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದರು.

‘ಈ ಕುರಿತು ಬಹಳ ಹಿಂದೆಯೇ ದಿನಾಂಕ ನಿಗದಿಯಾಗಿದೆ. ಕೇಜ್ರಿವಾಲ್‌ ಅವರು ಮಾರ್ಚ್‌ 16ರಂದು ನ್ಯಾಯಾಲಯಕ್ಕೆ ಹಾಜರಾಗುವುದಾಗಿ ಭರವಸೆ ನೀಡಿದ್ದರು. ಈಗ ತಿಂಗಳ ಬಳಿಕ, ಪುನಃ ವಿನಾಯಿತಿ ಕೇಳುತ್ತಿದ್ದಾರೆ. ಇದು ಅಪ್ರಾಮಾಣಿಕ ನಡವಳಿಕೆ. ಹೀಗಾಗಿ ಇದು ಮಧ್ಯಂತರ ಪರಿಹಾರಕ್ಕೆ ಅರ್ಹವಲ್ಲ’ ಎಂದು ಅವರು ತಿಳಿಸಿದರು. 

ವಾದ, ಪ್ರತಿವಾದ ಆಲಿಸಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ರಾಕೇಶ್‌ ಸೈಲ್‌ ಅವರು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT