ನವದೆಹಲಿ: ಒಂದು ವಾರದಿಂದ ಲಾಕ್‌ಡೌನ್ ಘೋಷಿಸಿ, ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಿದ್ದರೂ ದೆಹಲಿಯಲ್ಲಿ ಕೊರೊನಾ ಕಂಟಕ ಮುಂದುವರಿದಿದೆ.

ಶನಿವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೆಹಲಿಯ ವಿವಿಧೆಡೆ ಪರೀಕ್ಷೆಗೆ ಒಳಪಟ್ಟಿರುವ 74,702 ಜನರ ಪೈಕಿ (ಶೇ 32.27ರಷ್ಟು) ಹೊಸದಾಗಿ 24,103 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಚಿಕಿತ್ಸೆಗೆ ಸ್ಪಂದಿಸದೆ 347 ಜನ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ 22,695 ಜನ ಗುಣಮುಖರಾಗಿ ಮನೆಗೆ ಮರಳಿದ್ದು, ಪ್ರಸ್ತುತ 93,080 ಸಕ್ರಿಯ ಪ್ರಕರಣಗಳಿವೆ.

ಕಳೆದ ಮಾರ್ಚ್‌ನಿಂದ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 10 ಲಕ್ಷದ ಗಡಿ ದಾಟಿದ್ದು, ಶನಿವಾರ 10,04,782 ತಲುಪಿದೆ. ಇದುವರೆಗೆ ಒಟ್ಟು 13,898 ಜನ ಸಾವಿಗೀಡಾಗಿದ್ದಾರೆ. 8,97,804 ಜನ ಗುಣಮುಖರಾಗಿದ್ದಾರೆ.

ಕೊರೊನಾ ತಹಬದಿಗೆ ತರುವ ಸಲುವಾಗಿ ನಗರದಾದ್ಯಂತ ಒಟ್ಟು 28,79,510 ಜನರಿಗೆ ಲಸಿಕೆ ನೀಡಲಾಗಿದ್ದು, ಉಚಿತ ಲಸಿಕೆ ಅಭಿಯಾನ ಮುಂದುವರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.