ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಇಂದು (ಶನಿವಾರ) ಬಿಡುಗಡೆಗೊಳಿಸಿದೆ.

ಜ.4ರಂದು ಪಕ್ಷವು 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿತ್ತು. ಇಂದು ನಡೆದ ಸಭೆಯ ಬಳಿಕ ಎರಡನೇ ಪಟ್ಟಿ ಪ್ರಕಟಿಸಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ.

ಕರಾವಲ್ ನಗರದಿಂದ ಕಪಿಲ್ ಮಿಶ್ರಾ, ಮೋತಿ ನಗರದಿಂದ ಹರೀಶ್ ಖುರಾನಾ, ಕೊಂಡಲಿ ಕ್ಷೇತ್ರದಿಂದ ಪ್ರಿಯಾಂಕಾ ಗೌತಮ್ ಸೇರಿದಂತೆ ಪ್ರಮುಖರನ್ನು ಕಣಕ್ಕಿಳಿಸಿದೆ.

ಈ ಪೈಕಿ ಪ್ರಿಯಾಂಕಾ ಇತ್ತೀಚೆಗಷ್ಟೇ ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದೆ. ಬಳಿಕ ಫೆಬ್ರುವರಿ 8ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
.ದೆಹಲಿ ವಿಧಾನಸಭಾ ಚುನಾವಣೆ: ಮಹಿಳಾ ಮತದಾರರ ಓಲೈಕೆ.ದೆಹಲಿ ಚುನಾವಣೆ | BJP ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ಪರ್ವೇಶ್ ಸ್ಪರ್ಧೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.