ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಲಿಸ್ತಾನ್‌: ಜಿತೇಂದರ್ ಸಿಂಗ್‌ಗೆ ಜೀವ ಬೆದರಿಕೆ; ದೂರು ದಾಖಲು

Published 30 ಏಪ್ರಿಲ್ 2024, 3:24 IST
Last Updated 30 ಏಪ್ರಿಲ್ 2024, 3:24 IST
ಅಕ್ಷರ ಗಾತ್ರ

ನವದೆಹಲಿ: ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಶಾಸಕ, ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶಂಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪದ್ಮ ಪ್ರಶಸ್ತಿ ಪಡೆದಿರುವ ಜಿತೇಂದರ್ ಸಿಂಗ್ ಶಂಟಿ ಅವರು ದೆಹಲಿ ಪೊಲೀಸರಿಗೆ ಪತ್ರ ಬರೆದು ದೂರು ನೀಡಿದ್ದಾರೆ. 

ಭಗತ್ ಸಿಂಗ್ ಸೇವಾ ದಳದ ಅಧ್ಯಕ್ಷರಾಗಿರುವ ಅವರು, ಸೋಮವಾರ ತನಗೆ ವಾಟ್ಸ್ಆ್ಯಪ್‌ ಕರೆ ಬಂದಿತ್ತು. ಕರೆ ಮಾಡಿದವರು ಪಂಜಾಬಿ ಭಾಷೆಯಲ್ಲಿ ಮಾತನಾಡಿ ನನ್ನ ಮಗನ ಹೆಸರನ್ನು ಕೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. 

ಖಲಿಸ್ತಾನದ ವಿರುದ್ಧ ಮಾತನಾಡಿದ್ದಕ್ಕಾಗಿ ನನಗೆ, ನನ್ನ ಮಗನಿಗೆ ಜೀವ ಬೆದರಿಕೆ ಇದೆ. ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು ಎಂದು ಅವರು ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT