ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದ ಪ್ರಕರಣ ಕುರಿತು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಆದೇಶ ಪ್ರಕಟಿಸಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆ ಮತ್ತು ಆರೋಪಪಟ್ಟಿಯಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಇತರ 21 ಜನರನ್ನು ಖುಲಾಸೆಗೊಳಿಸಿ ಜಿತೇಂದ್ರ ಸಿಂಗ್ ತೀರ್ಪು ನೀಡಿದ್ದಾರೆ.

ದೆಹಲಿಯಲ್ಲಿ ಹಿಂದಿನ ಎಎಪಿ ಸರ್ಕಾರವು ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ನಡೆಸಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.

ಏನಿದು ಹಗರಣ?

2021–22ರಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ ವರದಿಯಿಂದಾಗಿ ‘ಅಬಕಾರಿ ನೀತಿ ಪ್ರಕರಣ’ ಮುನ್ನೆಲೆಗೆ ಬಂದಿತು. ದೆಹಲಿಯಲ್ಲಿ ಹಿಂದಿನ ಎಎಪಿ ಸರ್ಕಾರವು ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ನಡೆಸಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸಿಬಿಐ ತನಿಖೆ ನಡೆಸಿತ್ತು.

2021ರ ನವೆಂಬರ್ನಲ್ಲಿ ದೆಹಲಿ ಅಬಕಾರಿ ನೀತಿಯನ್ನು ಜಾರಿಗೆ ತರಲಾಯಿತು. ವಿವಾದದ ಬಳಿಕ 2022ರ ಜುಲೈಯಲ್ಲಿ ಇದನ್ನು ರದ್ದುಪಡಿಸಲಾಯಿತು.

ಎಲ್.ಜಿ. ಸಕ್ಸೇನಾ ಅವರಿಗೆ ಸಲ್ಲಿಸಲಾದ ವರದಿಯಲ್ಲಿ ಎಎಪಿ ಸರ್ಕಾರ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರು ತೆಗೆದುಕೊಂಡ ಏಕಪಕ್ಷೀಯ ನಿರ್ಧಾರದಿಂದ ಸರ್ಕಾರ ಖಜಾನೆಗೆ ₹580 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿತ್ತು.

2022ರ ಆರಂಭದಲ್ಲಿ ಪಂಜಾಬ್ ಮತ್ತು ಗೋವಾದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಭಾವ ಬೀರುವ ಸಲುವಾಗಿ ಎಎಪಿ ಸರ್ಕಾರ ಅಬಕಾರಿ ಪರವಾನಗಿ ಶುಲ್ಕದಲ್ಲಿ ರಿಯಾಯಿತಿ, ದಂಡದ ಮೇಲಿನ ವಿನಾಯಿತಿ ಘೋಷಿಸಿತ್ತು. ಕೋವಿಡ್-19 ಸಾಂಕ್ರಾಮಿಕ ಸೇರಿದಂತೆ ವಿವಿಧ ಪರಿಹಾರ ಕ್ರಮಗಳಿಗಾಗಿ ಎಎಪಿ ನಾಯಕರು ಮದ್ಯದ ಅಂಗಡಿ ಮಾಲೀಕರಿಂದ ಪಡೆದ ಲಂಚ ಹಣವನ್ನು ಬಳಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಕೇಜ್ರಿವಾಲ್ ಪಿಎ ಸೇರಿ ಎಎಪಿ ಹಲವರ ಸ್ಥಳಗಳಲ್ಲಿ ಇ.ಡಿ ದಾಳಿ

2022ರಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಮತ್ತು ಎಎಪಿಯ ಹಲವು ನಾಯಕರಿಗೆ ಸೇರಿದ ಸ್ಥಳಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರ ನಿವಾಸ, ದೆಹಲಿ ಜಲ ಮಂಡಳಿ (ಡಿಜೆಬಿ) ಮಾಜಿ ಸದಸ್ಯ ಶಲಭ್ ಕುಮಾರ್, ಪಕ್ಷದ ರಾಜ್ಯಸಭೆ ಸದಸ್ಯ ಮತ್ತು ರಾಷ್ಟ್ರೀಯ ಖಜಾಂಚಿ ಎನ್.ಡಿ. ಗುಪ್ತಾ ಅವರ ಕಚೇರಿ ಮತ್ತು ಎಎಪಿ ಜತೆಗೆ ನಂಟಿರುವ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪಂಕಜ್ ಮಂಗಲ್ ಅವರ ಸಂಸ್ಥೆಯ ಅಧಿಕಾರಿಗಳಿಗೆ ಸೇರಿದ ರಾಜಧಾನಿಯಲ್ಲಿನ 10ರಿಂದ 12 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು.

ಸತ್ಯೇಂದ್ರ ಜೈನ್ ಬಂಧನ...

2022ರ ಜೂನ್ 27ರಂದು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇ.ಡಿ ಬಂಧಿಸಿತ್ತು.

ಸಿಸೋಡಿಯಾ ಬಂಧನ...

2023ರ ಫೆಬ್ರುವರಿ 26ರಂದು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ್ದವು.

‘ಸಿಸೋಡಿಯಾ ‘ಕಿಂಗ್ ಪಿನ್’

‘ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಸೂತ್ರಧಾರಿ. ಆರ್ಥಿಕ ಅಪರಾಧ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ’ ಎಂದು ಸಿಬಿಐ, ದೆಹಲಿ ಹೈಕೋರ್ಟ್ಗೆ ತಿಳಿಸಿತ್ತು.

ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ಈ ಸಂಬಂಧ ನ್ಯಾಯಾಲಯಕ್ಕೆ ಲಿಖಿತ ಪ್ರತಿಕ್ರಿಯೆ ಸಲ್ಲಿಸಿತ್ತು. 17 ತಿಂಗಳಿಂದ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಅವರಿಗೆ 2024ರ ಆಗಸ್ಟ್ 9ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಲ್ಲೇ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು.

ಸಿಸೋಡಿಯಾ, ಜೈನ್ ರಾಜೀನಾಮೆ

2023ರ ಫೆಬ್ರುವರಿ 28ರಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಸಚಿವ ಸತ್ಯೇಂದರ್ ಜೈನ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಅಬಕಾರಿ ನೀತಿ ಹಗರಣ ಸಂಬಂಧ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಹಣ ಅಕ್ರಮ ವರ್ಗಾವಣೆ ಸಂಬಂಧ ಸತ್ಯೇಂದರ್ ಜೈನ್ ಅವರನ್ನು ಇ.ಡಿ ಬಂಧಿಸಿತ್ತು.

ಸಿಸೋಡಿಯಾ ಅವರ ಬಳಿ 18 ಖಾತೆಗಳು ಇದ್ದವು. ಇದರಲ್ಲಿ ಆರೋಗ್ಯ, ಹಣಕಾಸು, ಶಿಕ್ಷಣ ಮತ್ತು ಗೃಹ ಇಲಾಖೆಗಳು ಸೇರಿದ್ದವು. ಸತ್ಯೇಂದರ್ ಜೈನ್ ಅವರ ಬಂಧನ ನಂತರ, ಜೈನ್ ಅವರ ಬಳಿ ಇದ್ದ ಆರೋಗ್ಯ, ಗೃಹ, ನಗರಾಭಿವೃದ್ಧಿ ಖಾತೆಗಳನ್ನೂ ಸಿಸೋಡಿಯಾ ಅವರಿಗೆ ನೀಡಲಾಗಿತ್ತು.

ಸಿಸೋಡಿಯಾ ಬಂಧನದ ಬಳಿಕ ಅವರ ಬಳಿ ಇದ್ದ 18 ಖಾತೆಗಳನ್ನು ಕಂದಾಯ ಸಚಿವ ಕೈಲಾಶ್ ಗೆಹಲೋತ್ ಹಾಗೂ ಸಾಮಾಜಿಕ ಅಭಿವೃದ್ಧಿ ಸಚಿವ ರಾಜ್ ಕುಮಾರ್ ಆನಂದ್ ಅವರಿಗೆ ಹಂಚಿಕೆ ಮಾಡಲಾಯಿತು.

ಸಂಜಯ್ ಸಿಂಗ್ ಬಂಧನ...

2023ರ ಅಕ್ಟೋಬರ್ 4ರಂದು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು.

ಕವಿತಾ ಬಂಧನ...

2024ರ ಮಾರ್ಚ್ 15ರಂದು ತೆಲಂಗಾಣದ ಬಿಆರ್ಎಸ್ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಕೇಜ್ರಿವಾಲ್ ಬಂಧನ...

2024ರ ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೆಶನಾಲಯವು (ಇ.ಡಿ) ಬಂಧಿಸಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್ ಅವರು ಪ್ರಮುಖ ಸಂಚುಕೋರ. ಅವರು ಅಬಕಾರಿ ನೀತಿ ರೂಪಿಸುವ ಕಾರ್ಯದಲ್ಲಿ ನೇರವಾಗಿ ಭಾಗಿಯಾಗಿದ್ದರು. ಜತೆಗೆ, ಅವರು ಪಕ್ಷದ ಮುಖ್ಯಸ್ಥರು ಎಂದು ಜಾರಿ ನಿರ್ದೇಶನಾಲಯ ಹೇಳಿತ್ತು.

‘2021–22ರ ದೆಹಲಿ ಅಬಕಾರಿ ನೀತಿ ರೂಪಿಸಲು ಹಾಗೂ ಅನುಷ್ಠಾನಗೊಳಿಸಲು ಕೇಜ್ರಿವಾಲ್ ಅವರು ‘ಸೌತ್ ಗ್ರೂಪ್’ನಿಂದ (ಬಂಧಿತ ಬಿಆರ್ಎಸ್ ನಾಯಕಿ ಕೆ.ಕವಿತಾ ಹಾಗೂ ಇತರ ಹಲವು ಮಂದಿಯನ್ನು ಒಳಗೊಂಡಿರುವ ಕಂಪನಿ) ಹಲವಾರು ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ’ ಎಂದು ಇ.ಡಿ. ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಹೇಳಿದ್ದರು.

‘ಪಂಜಾಬ್ ಚುನಾವಣೆಗಾಗಿ ‘ಸೌತ್ ಗ್ರೂಪ್’ನ ಕೆಲವು ಆರೋಪಿಗಳಿಂದ ₹100 ಕೋಟಿಗೆ ಬೇಡಿಕೆ ಇಟ್ಟಿದ್ದರು. ನಾಲ್ಕು ಹವಾಲಾ ಮಾರ್ಗಗಳಿಂದ ಬಂದ ₹45 ಕೋಟಿಯನ್ನು ಗೋವಾ ಚುನಾವಣೆಗೆ ಬಳಸಲಾಗಿತ್ತು. ಗೋವಾ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಗಳಿಗೆ ಹಣ ನೀಡಲು ಅಬಕಾರಿ ನೀತಿಯನ್ನು ಬದಲಾಯಿಸಲಾಗಿತ್ತು. ಹಗರಣ ನಡೆದಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ. ಗೋವಾ ಚುನಾವಣೆಯ ಸಂದರ್ಭದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಹಲವು ಜನರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಈ ಆರೋಪಗಳನ್ನು ಎಎಪಿ ಅಭ್ಯರ್ಥಿಯೊಬ್ಬರು ದೃಢೀಕರಿಸಿದ್ದಾರೆ. ಆರೋಪಿಗಳು ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಕರೆ ವಿವರ ದಾಖಲೆಗಳ (ಸಿಡಿಆರ್) ಮೂಲಕ ದೃಢೀಕರಿಸಲಾಗಿದೆ’ ಎಂದು ಅವರು ತಿಳಿಸಿದ್ದರು.

ಸಿಬಿಐಗೆ ಕುಟುಕಿದ್ದ ‘ಸುಪ್ರೀಂ’

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ‘ಅಗತ್ಯ’ ಹಾಗೂ ಬಂಧನದ ‘ಸಮಯ’ದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಛೀಮಾರಿ ಹಾಕಿದ್ದ ಸುಪ್ರೀಂ ಕೋರ್ಟ್, ‘ತನಿಖಾ ಸಂಸ್ಥೆಯು ಪಂಜರದ ಗಿಳಿಯಾಗಬಾರದು’ ಎಂದು ಕಟುವಾಗಿ ಹೇಳಿತ್ತು.

ಕೇಜ್ರಿವಾಲ್ ಸಲ್ಲಿಸಿರುವ ಜಾಮೀನು ಅರ್ಜಿ ಮತ್ತು ಸಿಬಿಐ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರು ಸಲ್ಲಿಸಿದ ಇನ್ನೊಂದು ಅರ್ಜಿಯ ಸಂಬಂಧ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾಂ ಅವರಿದ್ದ ಪೀಠ ತೀರ್ಪು ಪ್ರಕಟಿಸಿತ್ತು.

‘ಈ ತನಿಖಾ ಸಂಸ್ಥೆಯು ಪಂಜರದ ಗಿಳಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಭಾವನೆ ಜನರಲ್ಲಿದೆ. ಈ ಭಾವನೆಯನ್ನು ಹೋಗಲಾಡಿಸಬೇಕು’ ಎಂದು ನ್ಯಾಯಮೂರ್ತಿ ಭುಯಾಂ ಹೇಳಿದ್ದರು. ಸೀಸರ್ ಪತ್ನಿಯ ಉಪಮೆ ಯನ್ನು ಉಲ್ಲೇಖಿಸಿದ ಅವರು, ‘ಸಂಸ್ಥೆಯು ಸಂಶಯಾತೀತ ಆಗಿರಬೇಕು’ ಎಂದು ಕಿವಿಮಾತು ಹೇಳಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಎಎಪಿಗೆ ಸೋಲು?

ಅಬಕಾರಿ ಹಗರಣದಿಂದಾಗಿ 2025ರಲ್ಲಿ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲು ಕಂಡಿತು. ಎಎಪಿ ಪಾಲಿನ ಬಲಿಷ್ಠ ಕೋಟೆ ಎನ್ನಲಾಗಿದ್ದ ದೆಹಲಿಯಲ್ಲಿ ಆ ಪಕ್ಷದ 10 ವರ್ಷಗಳ ಆಡಳಿತ ಕೊನೆಗೊಂಡಿತು. ಅಲ್ಲಿ ಅದು ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟಿತ್ತು. ಬಿಜೆಪಿಯು ದೆಹಲಿಯಲ್ಲಿ 27 ವರ್ಷಗಳ ನಂತರದಲ್ಲಿ ಅಧಿಕಾರಕ್ಕೆ ಮರಳಿತು. ದೇಶದ ರಾಜಧಾನಿಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸತತ ಮೂರನೆಯ ಬಾರಿಗೆ ಶೂನ್ಯ ಸಂಪಾದಿಸಿತು. ಬಿಜೆಪಿಯು ದೆಹಲಿಯಲ್ಲಿ ಎಎಪಿಗೆ ಮಾತ್ರ ಭಾರಿ ಏಟು ಕೊಟ್ಟಿಲ್ಲ, ಆ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರಿಗೂ ಪೆಟ್ಟು ಕೊಟ್ಟಿತ್ತು.

ಸರ್ಕಾರಕ್ಕೆ ₹2,000 ಕೋಟಿ ನಷ್ಟ: ಸಿಎಜಿ

ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು 2021–2022ರಲ್ಲಿ ಜಾರಿಗೊಳಿಸಿದ್ದ ಅಬಕಾರಿ ನೀತಿಯಿಂದಾಗಿ ಸರ್ಕಾರಕ್ಕೆ ಒಟ್ಟಾರೆ ₹2,000 ಕೋಟಿ ನಷ್ಟ ಉಂಟಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ.

2025ರ ಫೆಬ್ರುವರಿ 25ರಂದು ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಬಿಜೆಪಿ ಸರ್ಕಾರವು ವಿಧಾನಸಭೆಯಲ್ಲಿ ಮಂಡಿಸಿದ ಸಿಎಜಿ ವರದಿಯು, ಅಬಕಾರಿ ನೀತಿಯ ಅನುಷ್ಠಾನ ಪ್ರಕ್ರಿಯೆಯಲ್ಲಿನ ಲೋಪ ಸೇರಿದಂತೆ ನಷ್ಟಕ್ಕೆ ಕಾರಣವಾದ ವಿವಿಧ ಅಂಶಗಳನ್ನು ಪಟ್ಟಿಮಾಡಿತ್ತು.

ಪ್ರಕರಣದಲ್ಲಿ ಖುಲಾಸೆ: ಕೇಜ್ರಿವಾಲ್ ಹೇಳಿದ್ದೇನು?

ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಅವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ನಾಯಕರು ನಮ್ಮ ಮೇಲೆ ಆರೋಪ ಮಾಡುತ್ತಿದ್ದರು. ಇಂದು ನ್ಯಾಯಾಲಯವು ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ಇದು ಸತ್ಯಕ್ಕೆ ಲಭಿಸಿದ ಗೆಲುವು’ ಎಂದು ಭಾವುಕರಾಗಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಪಕ್ಷದ (ಎಎಪಿ) ವಿರುದ್ಧ ಪಿತೂರಿ ನಡೆಸಿದ್ದರು. ಹಾಲಿ ಮುಖ್ಯಮಂತ್ರಿಯಾಗಿದ್ದ ನನ್ನನ್ನೂ ಸೇರಿದಂತೆ ಐವರು ಎಎಪಿ ನಾಯಕರನ್ನು ಬಂಧಿಸಲಾಗಿತ್ತು. ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಲಾಗಿತ್ತು. ಪ್ರತಿ ಚಾನೆಲ್ನಲ್ಲಿಯೂ ನಮ್ಮನ್ನು ಭ್ರಷ್ಟರೆಂದು ಬಿಂಬಿಸಲಾಗಿತ್ತು. ಆದರೆ, ನಾನು ಭ್ರಷ್ಟನಲ್ಲ. ನಾನು ಪ್ರಾಮಾಣಿಕತೆಯನ್ನು ಮಾತ್ರ ಗಳಿಸಿದ್ದೇನೆ. ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು ಪ್ರಾಮಾಣಿಕರು ಎಂದು ನ್ಯಾಯಾಲಯ ಹೇಳಿದೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ.
.ಅಬಕಾರಿ ನೀತಿ ಹಗರಣ: ದೆಹಲಿ ಮಾಜಿ CM ಅರವಿಂದ ಕೇಜ್ರಿವಾಲ್, DCM ಸಿಸೋಡಿಯಾ ಖುಲಾಸೆ.ಮಾಧ್ಯಮದ ಎದುರು ಗಳಗಳನೆ ಅತ್ತ ಆರೋಪದಿಂದ ಮುಕ್ತ ಕೇಜ್ರಿವಾಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.