ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಶನಿವಾರ) ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಈಗಾಗಲೇ ಇಂಥ ಐದು ದೂರುಗಳನ್ನು ದಾಖಲಿಸಿದೆ.

ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್ ಸಿಂಗ್ ಅವರನ್ನು ಇ.ಡಿ. ಅಧಿಕಾರಿಗಳು ಅ.4ರಂದು ಬಂಧಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ದೆಹಲಿಯ ನ್ಯಾಯಾಲಯ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿತ್ತು.

ಉದ್ಯಮಿ ದಿನೇಶ್ ಅರೋರಾ ಅವರಿಂದ ₹2 ಕೋಟಿ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಆರೋಪವನ್ನು ಸಂಜಯ್ ಸಿಂಗ್ ತಳ್ಳಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.