ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮೇ 25ರಂದು ನಡೆಸಲಿದೆ.

ವಿಚಾರಣಾ ನ್ಯಾಯಪೀಠದ ಬದಲಾವಣೆ ಬಗ್ಗೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಮಾಜಿ ಶಾಸಕ ದುರ್ಗೇಶ್ ಪಾಠಕ್ ಅವರಿಗೆ ಮಾಹಿತಿ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

‘ನ್ಯಾಯಪೀಠ ಬದಲಾವಣೆ ಬಗ್ಗೆ ಅವರಿಗೆ ಮಾಹಿತಿ ನೀಡಿ. ಪ್ರಸಕ್ತ ಸನ್ನಿವೇಶದ ಬಗ್ಗೆ ಪ್ರತಿಕ್ರಿಯೆ ನೀಡುವುದಿದ್ದರೆ ನೀಡಲಿ’ ಎಂದು ನ್ಯಾಯಮೂರ್ತಿ ಮನೋಜ್ ಜೈನ್ ಹೇಳಿದರು. ವಿಚಾರಣಾ ನ್ಯಾಯಾಲಯವು ಫೆಬ್ರುವರಿ 27ರಂದು ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-1997323172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.